ಬಜೆಟ್ ನನ್ನದೇ, ಅನುಮಾನ ಬೇಡ: ಡಿವಿ
ಹುಬ್ಬಳ್ಳಿ: ನಾನೇ ಬಜೆಟ್ ಮಂಡಿಸುತ್ತೇನೆ. ಯಾವುದೇ ರೀತಿಯ ಅನುಮಾನ ಬೇಡ ಎಂದು ಹೇಳಿಕೆ ನೀಡಿ ಮುಖ್ಯಮಂತ್ರಿ ಸದಾನಂದ ಗೌಡರು ಗೊಂದಲಗಳಿಗೆ ಅಂತ್ಯ ಹಾಡಿದ್ದಾರೆ.
ನಗರದಲ್ಲಿ ಆಯೋಜಿಸಲಾದ ಹಿಂದೂ ಶಕ್ತಿ ಸಂಗಮ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಒಂದು ತಿಂಗಳ ಕಾಲ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿ, ಕೈಗಾರಿಕೋದ್ಯಮಿಗಳು, ಸಂಘಟನೆಗಳು ಇತರ ಹಿರಿಯ ತಜ್ಞರೊಂದಿಗೆ ಸಮಾಲೋಚಿಸಿ ಬಜೆಟ್ ಮಂಡಿಸುವುದಾಗಿ ಹೇಳಿದ್ದಾರೆ.
ಮುಂಬರುವ ಮಾರ್ಚ್ 9 ರಂದು ವಿಧಾನಸಭೆಯಲ್ಲಿ ಬಜೆಟ್ ಮಂಡಿಸಲು ನಿರ್ಧರಿಸಲಾಗಿದೆ. ಬಜೆಟ್ ಚುನಾವಣೆ ಪರವಾಗಿರದೆ, ಜನಪರವಾಗಿರುತ್ತದೆ ಎಂದು ತಿಳಿಸಿದ್ದಾರೆ.



0 Comments
You can be the first one to leave a comment.