ಜಯಚಾಮರಾಜ ಒಡೆಯರ್ ಜನ್ಮ ಶತಮಾನೋತ್ಸವ : ರಾಷ್ಟ್ರಪತಿ ಭೇಟಿ ಮಾಡಿದ ಪ್ರಮೋದಾದೇವಿ ಒಡೆಯರ್..

kannada t-shirts

 

ಮೈಸೂರು, ಜೂ.19, 2019 : (www.justkannada.in news) : ಜಯಚಾಮರಾಜ ಒಡೆಯರ್  ಅವರ ಜನ್ಮದಿನದ ಶತಮಾನೋತ್ಸವದ ಅರ್ಥಪೂರ್ಣ ಹಾಗೂ ಸಂಭ್ರಮದ ಆಚರಣೆಗೆ ರಾಜವಂಶಸ್ಥರು ಪೂರ್ವ ತಯಾರಿ ನಡೆಸುತ್ತಿದ್ದಾರೆ.

ಈ ಸಂಬಂಧ ಪ್ರಮೋದಾದೇವಿ ಒಡೆಯರ್ ಅವರು ರಾಷ್ಟ್ರಪತಿ ರಮಾನಾಥ್ ಕೋವಿಂದ್ ಅವರನ್ನು ಭೇಟಿ ಮಾಡಿ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ ಎಂದು ವಿಶ್ವಾಸನೀಯ ಮೂಲಗಳು ಜಸ್ಟ್ ಕನ್ನಡ ಡಾಟ್ ಇನ್ ಗೆ ಮಾಹಿತಿ ನೀಡಿವೆ.
ಜು.18, 2019 ಕ್ಕೆ ಜಯಚಾಮರಾಜ  ಒಡೆಯರ್ ಅವರ ಜನ್ಮ ಶತಮಾನೋತ್ಸವ. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮ ಆಯೋಜಿಸಿಲು ಭರದ ಸಿದ್ಧತೆ ನಡೆಸಲಾಗುತ್ತಿದೆ. ಗಣ್ಯಾತಿ ಗಣ್ಯರನ್ನು ಈ ಕಾರ್ಯಕ್ರಮಕ್ಕೆ ಆಹ್ವಾನಿಸಲು ರಾಜವಂಶಸ್ಥರು ಸಿದ್ಧತೆ ನಡೆಸಿದ್ದು, ಇದರ ಅಂಗವಾಗಿಯೇ ಪ್ರಮೋದಾದೇವಿ ಒಡೆಯರ್ ಅವರು ಕಳೆದ ವಾರ ದಿಲ್ಲಿಯಲ್ಲಿ ರಾಷ್ಟ್ರಪತಿಗಳನ್ನು ಭೇಟಿ ಮಾಡಿದ್ದು ಎನ್ನಲಾಗುತ್ತಿದೆ.

ಹಿನ್ನೆಲೆ :
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ – ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು. ರಾಜಕುಮಾರನಿಗೆ ಸೂಕ್ತ ವಿದ್ಯಾಭ್ಯಾಸ, ಆಡಳಿತ ತರಬೇತಿ ಇವುಗಳನ್ನು ಮಹಾರಾಣಿಯವರು ತೀವ್ರ ನಿಗಾ ವಹಿಸಿ ನಡೆಸಿದುದರ ಪರಿಣಾಮವಾಗಿ, ಮೈಸೂರು ರಾಜ್ಯಕ್ಕೆ ಒಬ್ಬ ಸಮರ್ಥ ಆಡಳಿತಗಾರರಾಗಿ ನಾಲ್ವಡಿ ಕೃಷ್ಣರಾಜ ಒಡೆಯರು ದೊರಕಿದರು.

ಮೈಸೂರು ಘಟಿಕೋತ್ಸವದಲ್ಲಿ ಮಾಡಿದ ಭಾಷಣ
ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಮೈಸೂರು ವಿಶ್ವವಿದ್ಯಾನಿಲಯದ ಮೊಟ್ಟ ಮೊದಲ ಘಟಿಕೋತ್ಸವದಲ್ಲಿ – “ಶಿಕ್ಷಣವು ಕೆಲವೇ ಅದೃಷ್ಟಶಾಲಿಗಳಿಗೆ ಮಾತ್ರವಲ್ಲ. ಎಲ್ಲರಿಗೂ ಉನ್ನತ ಶಿಕ್ಷಣ ದೊರೆಯಲಿ ಎಂಬ ಕಾರಣಕ್ಕಾಗಿಯೇ ಮೈಸೂರು ವಿಶ್ವ ವಿದ್ಯಾನಿಲಯವನ್ನು ಸ್ಥಾಪಿಸಲಾಗಿದೆ. ಇದು ದೇಶದ ಅಸ್ಪೃಶ್ಯ, ಹಿಂದುಳಿದ, ಅಲ್ಪಸಂಖ್ಯಾತರುಗಳಿಗೆ ಅಂದರೆ ಶೇ.೮೫ ರಷ್ಟಿರುವ ಹಿಂದುಳಿದ ಎಲ್ಲಾ ಸಮುದಾಯದವರಿಗೆ ಇದೆ. ಇಲ್ಲಿನ ಬೋಧಕರು ಅವರ ತಿಳುವಳಿಕೆಯ ಮಟ್ಟಕ್ಕೆ ಇಳಿದು ತಮ್ಮ ಜ್ಞಾನವನ್ನು ಅವರೊಂದಿಗೆ ಹಂಚಿಕೊಳ್ಳಬೇಕು” ಎಂದಿದ್ದರು.

president ramakanth kovind invited for the nalwadi krishnaraja wadiyar centenary celebration by pramoda devi wadiyar

Born on July 18, 1919, to Yuvaraja Narasimharaja Wadiyar and Kempachaluvajammanni, he was named as Chamaraja Wadiyar, in line with the family tradition of naming the heir apparent after ‘Krishna’. ‘Chama’ was the local pronunciation of ‘Shyama’, which denotes Krishna. However, ‘Jaya’, meaning ‘victory’ was added to his name.

He was coronated as the Maharaja on September 8, 1940, following the death of his uncle Nalvadi Krishnaraja Wadiyar (August 3, 1940). He died on September 23, 1974.

website developers in mysore