ಚಾಮರಾಜನಗರ,ಮಾ,20,2017(www.justkannada.in): ಗುಂಡ್ಲುಪೇಟೆ ಉಪಚುನಾವಣೆಕ್ಕೆ ಸಂಬಂಧಿಸಿದಂತೆ ನಾಮಪತ್ರ ಸಲ್ಲಿಕೆಯ ವೇಳೆ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ  ನಡುವೆ ಮಾತಿನ ಚಕಮಕಿ ನಡೆದಿದೆ.

ನಂಜನಗೂಡು ಹಾಗೂ ಗುಂಡ್ಲುಪೇಟೆ ಉಪಚುನಾವಣೆಗೆ ನಾಳೆ ನಾಮಪತ್ರ ಸಲ್ಲಿಕೆಗೆ ಕಡೆ ದಿನವಾಗಿದ್ದು, ಇಂದು ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದರು.

ಈ ನಡುವೆ ಗುಂಡ್ಲುಪೇಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಮಹದೇವ್ ಪ್ರಸಾದ್ ಹಾಗೂ ಬಿಜೆಪಿ ಅಭ್ಯರ್ಥಿ ನಿರಂಜನ್ ಕುಮಾರ್ ನಾಮಪತ್ರ ಸಲ್ಲಿಸಿದರು. ಈ ವೇಳೆ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದು ಗುಂಪನ್ನ ಚದುರಿಸಲು ಪೊಲೀಸರು ಲಘೂ ಲಾಠಿ ಪ್ರಹಾರ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.

Key words: activists -BJP –congress- gundlupete- submission –nomination