ಆರೋಪದಲ್ಲಿ ನಿಜವಿರಬಹುದು; ಆದರೆ ನ್ಯಾಯಮೂರ್ತಿಗಳು ಮಾಧ್ಯಮದ ಮುಂದೆ ಬಂದಿದ್ದು ತಪ್ಪು-ನಿವೃತ್ತ ಲೋಕಾಯುಕ್ತ ನ್ಯಾ. ಸಂತೋಷ್ ಹೆಗ್ಡೆ ಅಸಮಾಧಾನ…

0
153
allegation may be- true; -judges -media - Santosh Hegde is upset.

ಬೆಂಗಳೂರು,ಜನವರಿ,12,2018(www.justkannada.in): ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ಸುಪ್ರೀಂಕೋರ್ಟ್ ನ್ಯಾಯಾಧೀಶರು ಸುದ್ದಿಗೋಷ್ಠಿ ನಡೆಸಿ,  ಸುಪ್ರೀಂ ಕೋರ್ಟ್ ಆಡಳಿತ ವ್ಯವಸ್ಥೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವುದಕ್ಕೆ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಬೇಸರ ವ್ಯಕ್ತಪಡಿಸಿದ್ದಾರೆ.allegation may be- true; -judges -media - Santosh Hegde is upset.

ನಾಲ್ವರು ನ್ಯಾಯಾಧೀಶರ ಆರೋಪ ನಿಜವಿರಬಹುದು. ಆದರೆ ನ್ಯಾಯಮೂರ್ತಿಗಳು ಮಾಧ್ಯಮದ ಮುಂದೆ ಬಂದಿದ್ದು ತಪ್ಪು ಎಂದು ನಿವೃತ್ತ ಲೋಕಾಯುಕ್ತ ನ್ಯಾ. ಸಂತೋಷ್ ಹೆಗ್ಡೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಇಂದು ಮಾತನಾಡಿದ ಅವರು, ‘ಸಮಸ್ಯೆಗಳು ಇಲ್ಲವೆಂದಲ್ಲ. ಎಲ್ಲೆಡೆ ಇದೆ. ಆದರೆ, ಸ್ವಾತಂತ್ರ ಬಂದಾಗಿನಿಂದಲೂ ಜನರಿಗೆ ನ್ಯಾಯಾಂಗದ ಮೇಲೆ ಸಾಕಷ್ಟು ನಂಬಿಕೆ ಇದೆ. ನ್ಯಾಯಾಲಯದ ಮಿತಿಯೊಳಗೇ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕಿತ್ತು. ಈ ರೀತಿ ನ್ಯಾಯಾಂಗ ವ್ಯವಸ್ಥೆ ಸಾರ್ವಜನಿಕ ಚರ್ಚೆಗೆ ಬಂದಿದ್ದು ವಿಷಾದನೀಯ ಎಂದರು.

70 ವರ್ಷದಲ್ಲಿ ಸುಪ್ರೀಂ ಕೋರ್ಟಿಗೆ ನ್ಯಾಯಾಂಗದ ಬಗ್ಗೆ ಬಹಳ ಕಾಳಜಿ ಇಟ್ಟುಕೊಂಡಿದೆ. ನ್ಯಾಯಾಧೀಶರ ಬಗ್ಗೆಯೂ ಕಾಳಜಿ ಇದೆ. ಈ ರೀತಿ ಅಲ್ಲಿಯ ಸಮಸ್ಯೆಗಳನ್ನು ಬಹಿರಂಗಗೊಳಿಸುವುದು ತಪ್ಪು. ಇದರಿಂದ ಜನರಿಗೆ ನ್ಯಾಯಾಂಗದ ಮೇಲೆ ನಂಬಿಕೆ ಹೊರಟು ಹೋಗುತ್ತದೆ,’ ಎಂದಿದ್ದಾರೆ.

key words: allegation may be- true; -judges -media – Santosh Hegde is upset.