ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬ-ಅಂಗಡಿಗಳಿಗೆ ನುಗ್ಗಿದ ಲಾರಿ: 20 ಜನರ ಧಾರುಣ ಸಾವು

0
977

ಚಿತ್ತೂರು:ಏ-21:(www.justkannada.in)ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಲಾರಿಯೊಂದು ಅಂಗಡಿಗಳಿಗೆ ನುಗ್ಗಿದ ಪರಿಣಾಮ 20 ಮಂದಿ ಮೃತಪಟ್ಟಿರುವ ಧಾರುಣ ಘಟನೆ ಆಂಧ್ರಪ್ರದೇಶದ ಚಿತ್ತೂರಿನಲ್ಲಿ ನಡೆದಿದೆ.

ಇಲ್ಲಿನ ಎರ್ಪಾಡು ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿದ ಲಾರಿ ಮೊದಲು ಟಾಟಾಸುಮೋ, ವಿದ್ಯುತ್ ಕಂಬಗಳಿಗೆ ಡಿಕ್ಕಿ ಹೊಡೆದಿದೆ. ಲಾರಿ ಡಿಕ್ಕಿಹೊಡೆದ ರಭಸಕ್ಕೆ ವಿದ್ಯುತ್ ಕಂಬ ಉರುಳಿಬಿದ್ದಿದೆ. ಈ ವೇಳೆ ವಿದ್ಯುತ್ ಹರಿದು ಹಲವರು ಸಾವನ್ನಪ್ಪಿದ್ದಾರೆ.

ಅಂಗಡಿಗಳ ಮೇಲೆ ಲಾರಿ ಹಾಯ್ದಾಗ ರಸ್ತೆಯಲ್ಲಿದ್ದ ಹಲವಾರು ಜನರಿದ್ದು, ಅವರೆಲ್ಲ ಚೀರುತ್ತಾ ದಿಕ್ಕಾಪಾಲಾಗಿದ್ದಾರೆ. ಕೆಲವರು ತಪ್ಪಿಸಿಕೊಳ್ಳಲು ಅವಕಾಶವಿಲ್ಲದೇ ಲಾರಿ ಕೆಳಗೆ ಬಿದ್ದು ಸಾವನ್ನಪ್ಪಿದ್ದಾರೆ. ಘಟನೆ ಸಂಭವಿಸುತ್ತಿದ್ದಂತೆ ಲಾರಿ ಕ್ಲೀನರ್, ಡ್ರೈವರ್ ಪರಾರಿಯಾಗಿದ್ದಾರೆ.

ಗಾಯಾಳುಗಳಲ್ಲಿ ಹಲವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ಗಾಯಾಳುಗಳನ್ನು ತಿರುಪತಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿತ್ತೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Andhra,chitturu, Lorry Accident