ಬೆಂಗಳೂರು,ಫೆಬ್ರವರಿ,13,2018(www.justkannada.in): ರಾಜ್ಯಪ್ರವಾಸದಲ್ಲಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಜವಾರಿ ಕೋಳಿ ತಿಂದು ನರಸಿಂಹ ಸ್ವಾಮಿ ದೇಗುಲಕ್ಕೆ ಭೇಟಿ ನೀಡಿದ್ದಾರೆ. ಎಂದು ಆರೋಪಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪಗೆ ಊಟದ ಉಸ್ತುವಾರಿ ನೋಡಿಕೊಂಡಿದ್ದ ಕಾಂಗ್ರೆಸ್ ಮುಖಂಡ ಶಿವರಾಜ್ ತಂಗಡಗಿ ತಿರುಗೇಟು ನೀಡಿದ್ದಾರೆ.Before -God- rahul gandhi-not- eat- Meat

ದೇವರ ದರ್ಶನಕ್ಕೂ ಮುನ್ನ ರಾಹುಲ್ ಗಾಂಧಿ ಸೇವಿಸಿದ್ದು ಸಸ್ಯಹಾರ ಮಾಂಸಹಾರವಲ್ಲ ಎಂದು ಶಿವರಾಜ್ ತಂಗಡಗಿ ಸ್ಪಷ್ಟನೆ ನೀಡಿದ್ದಾರೆ.Before -God- rahul gandhi-not- eat- Meat

ನಾಲ್ಕು ದಿನಗಳ ಕಾಲ ರಾಜ್ಯ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ಅವರಿಗೆ ಮತ್ತು ಕೈ ನಾಯಕರಿಗೆ ಊಟದ ವ್ಯವಸ್ಥೆ ಮಾಡಿದ್ದ ಕೈ ಮುಖಂಡ ಶಿವರಾಜ್ ತಂಗಡಗಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ರಾಹುಲ್ ಗಾಂಧಿ ಮಾಂಸಹಾರ ಸೇವಿಸಿ ನರಸಿಂಹ ಸ್ವಾಮಿ ದೇಗುಲಕ್ಕೆ ಹೋಗಿಲ್ಲ. ಅವರು ತಿಂದಿದ್ದು ಆಲೋಗೆಡ್ಡೆ ಪಲ್ಯ,ಚಪಾತಿ,ಡಾಲ್ ಮತ್ತು ಪಾಯಸವನ್ನ ಎಂದು ತಿಳಿಸಿದ್ದಾರೆ.Before -God- rahul gandhi-not- eat- Meat

ಮೀನು ತಿಂದು ಧರ್ಮಸ್ಥಳ ಮಂಜುನಾಥನ ದರ್ಶನ ಪಡೆಯೋ ಸಿಎಂ ಸಿದ್ದರಾಮಯ್ಯ ಒಂದೆಡೆಯಾದರೆ, ಜವಾರಿ ಕೋಳಿ ತಿಂದು ನರಸಿಂಹ ಸ್ವಾಮಿಯ ದರ್ಶನ ಪಡೆಯೋ ಎಲೆಕ್ಷನ್ ಹಿಂದೂ ರಾಹುಲ್ ಗಾಂಧಿ ಮತ್ತೊಂದು ಕಡೆ. ಪ್ರತಿ ಬಾರಿ ಏಕೆ ಹಿಂದೂಗಳ ಭಾವನೆಗಳಿಗೆ ಕಾಂಗ್ರೆಸ್ ಧಕ್ಕೆ ತರುತ್ತಿದೆ? ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಟ್ವಿಟ್ಟರ್ ನಲ್ಲಿ ಟಾಂಗ್ ನೀಡಿದ್ದರು.

key words:Before -God- rahul gandhi-not- eat- Meat