ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಮತ್ತು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ರಾಜ್ಯ ಪ್ರವಾಸ…..

0
384
BJP national president -Amit Shah -AICC vice-president -Rahul Gandhi –visit- today.

ಬೆಂಗಳೂರು,12,2017(www.justkannada.in): ಇಂದು ಎರಡು ರಾಷ್ಟ್ರೀಯ ಪಕ್ಷಗಳ ಅಗ್ರ ನಾಯಕರು ಏಕಕಾಲದಲ್ಲಿ ರಾಜ್ಯಕ್ಕೆ ಪ್ರವೇಶ ಬೆಳೆಸಲಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಮೂರು ಪ್ರವಾಸ ಹಮ್ಮಿಕೊಂಡಿದ್ದರೆ, ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಇಂದು ರಾಯಚೂರಿನಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.BJP national president -Amit Shah -AICC vice-president -Rahul Gandhi –visit- today.

ಮುಂದಿನ ವಿಧಾನಸಭಾ ಚುನಾವಣೆ ಹಿನ್ನೆಲೆ ಈಗ ಕರ್ನಾಟಕದತ್ತ ರಾಷ್ಟ್ರೀಯ ಪಕ್ಷಗಳ ಗಮನ ಕೇಂದ್ರೀಕೃತವಾಗತೊಡಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮತ್ತು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಇಂದಿನಿಂದ ರಾಜ್ಯ ಪ್ರವಾಸ ಕೈಗೊಳ್ಳುತ್ತಿದ್ದಾರೆ.

ಮೂರು ದಿನಗಳ ಕರ್ನಾಟಕ ಪ್ರವಾಸ ಹಮ್ಮಿಕೊಂಡಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಎರಡು ಮಾಸ್ಟರ್ ಪ್ಲಾನ್’ಗಳನ್ನು ಜೊತೆಯಲ್ಲಿ ಇಟ್ಟುಕೊಂಡೇ ಬರುತ್ತಿದ್ದಾರೆ ಎನ್ನಲಾಗುತ್ತಿದೆ.

ಇನ್ನು ಇದೇ ವೇಳೆ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಕೂಡಾ ಇಂದು ರಾಯಚೂರಿಗೆ ಭೇಟಿ ನೀಡುತ್ತಿದ್ದು, ಮುಂದಿನ ಚುನಾವಣೆಗೆ ಹೈದ್ರಾಬಾದ್ ಕರ್ನಾಟಕದ ಮತಗಳನ್ನು ಸೆಳೆಯುವ ನಿಟ್ಟಿನಲ್ಲಿ ಮಹತ್ವದ ಸಮಾವೇಶ ಆಯೋಜಿಸಲಾಗಿದೆ. ಈ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಲಿದ್ದಾರೆ.

Key words: BJP national president -Amit Shah -AICC vice-president -Rahul Gandhi –visit- today.