ಬೆಂಗಳೂರು,ಏ,21,2017(www.justkannada.in): ಸಚಿವ ಸಂಪುಟ ವಿಸಸ್ತರಣೆ ವಿಚಾರಕ್ಕೆ ಸಂಬಂಧಿಸಿದಂತೆ ಪಕ್ಷದ ಹೈಕಮಾಂಡ್ ಜತೆ ಚರ್ಚಿಸಿ ಮುಂದಿನ ನಿರ್ಧಾರವನ್ನ ತೆಗೆದುಕೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಸ್ಪಷ್ಟನೆ ನೀಡಿದರು.Cabinet –expansion- issue- decision -discuss -High Command - CM Siddaramaiah

ಬೆಂಗಳೂರಿನಲ್ಲಿ ಇಂದು ಮಾತನಾಡಿದ  ಸಿಎಂ ಸಿದ್ದರಾಮಯ್ಯ, ಭಾನುವಾರ ನಡೆಯುವ ನೀತಿ ಆಯೋಗದ ಸಭೆಯಲ್ಲಿ ಭಾಗವಹಿಸಲು ನಾಳೆ ದೆಹಲಿಗೆ ತೆರಳುತ್ತಿದ್ದೇನೆ. ಭಾನುವಾರ ಆ ಸಭೆಯಲ್ಲಿ ಪಾಲ್ಗುಳ್ಳುವೆ. ನಂತರ ಹೈಕಮಾಂಡ್ ಭೇಟಿ ಮಾಡಿ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆ ನಡೆಸುತ್ತೇನೆ ಎಂದು ತಿಳಿಸಿದರು.

ನಾನು ಇವತ್ತು ದೇವೇಗೌಡರ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕಿತ್ತು. ಆದರೆ ಯಾಕೂ ಏನೋ ದೇವೇಗೌಡರು ಬರಲ್ಲ ಅಂದ್ರು.  ಮುಂದೆ ಯಾವಾಗಾದರೂ ದೇವೇಗೌಡರನ್ನ ಭೇಟಿ ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

Key words: Cabinet –expansion- issue- decision -discuss -High Command – CM Siddaramaiah