ಉಗ್ರಗಾಮಿಗಳು ಪದ ಬಳಸಿದ ಸಿಎಂ ಸಿದ್ದರಾಮಯ್ಯ ವಿರುದ್ದ ಬಿಜೆಪಿ ಮುಖಂಡರಿಂದ  ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು…

0
152
Complaint -Against -CM Siddaramaiah –bjp-Bangalore- City Police Commissioner

 

ಬೆಂಗಳೂರು,ಜನವರಿ,12,2018(www.justkannada.in):  ಬಿಜೆಪಿ ಹಾಗೂ ಆರ್ ಎಸ್ ಎಸ್ ನವರು ಉಗ್ರಗಾಮಿಗಳು ಎಂದು ಹೇಳಿಕೆ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಬಿಜೆಪಿ ಮುಖಂಡರು ಬೆಂಗಳೂರು ನಗರ ಪೊಲೀಸ್ ಆಯುಕ್ತ ಟಿ.ಸುನೀಲ್  ಕುಮಾರ್ ಅವರಿಗೆ ದೂರು ನೀಡಿದ್ದಾರೆ.Complaint -Against -CM Siddaramaiah –bjp-Bangalore- City Police Commissioner

ಬಿಜೆಪಿ ಮುಖಂಡ ಮಾಜಿ ಸಚಿವ ಸುರೇಶ್ ಕುಮಾರ್, ಬಿಜೆಪಿ ಮುಖಂಡೆ ಮಾಳವಿಕ ಅವಿನಾಶ್ ಸೇರಿ ಹಲವು ಮುಖಂಡರು ಇಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಟಿ.ಸುನೀಲ್  ಕುಮಾರ್ ಅವರನ್ನು ಭೇಟಿಯಾಗಿ ಸಿಎಂ ಸಿದ್ದರಾಮಯ್ಯ ವಿರುದ್ದ ದೂರು ದಾಖಲಿಸಿದ್ದಾರೆ.

ಕಳೆದ ಎರಡು ದಿನಗಳ ಹಿಂದೆ ಚಾಮರಾಜನಗರದಲ್ಲಿ ಮಾತನಾಡಿದ್ದ ಸಿಎಂ ಸಿದ್ದರಾಮಯ್ಯ, ಬಿಜೆಪಿ, ಆರ್ ಎಸ್ಎಸ್ ಬಜರಂಗದಳದವರು ಉಗ್ರಗಾಮಿಗಳು ಎಂದು ಹೇಳಿಕೆ ನೀಡಿದ್ದರು. ಮತ್ತೆ ನಿನ್ನೆ ಮೈಸೂರಿನಲ್ಲಿ ಮಾತನಾಡಿ,  ಹಿಂದುತ್ವದ ಉಗ್ರವಾದಿಗಳು ಎಂದಿದ್ದೇನೆ ಅಷ್ಟೆ ಎಂದು ಸ್ಪಷ್ಟನೆ ನೀಡಿದ್ದರು.

Key words: Complaint -Against -CM Siddaramaiah –bjp-Bangalore- City Police Commissioner