ಹಾಸನದ ಅಧಿದೇವತೆ ಹಾಸನಾಂಬೆ ದರ್ಶನಕ್ಕೆ ಕ್ಷಣಗಣನೆ: ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆ…

0
410
Countdown -Hassanbe -Darshan: -Devotees - Visit

ಹಾಸನ,ಅ,12,2017(www.justkannada.in): ವರ್ಷಕೊಮ್ಮೆ ಮಾತ್ರ ಬಾಗಿಲು ತೆರೆಯುವ ಹಾಸನಾಂಬೆಯ ಗರ್ಭಗುಡಿಯ ಬಾಗಿಲು ಇಂದು ತೆರೆಯಲಾಗುತ್ತದೆ. ಹಾಸನದ ಅಧಿದೇವತೆ ಹಾಸನಾಂಬೆ ದರ್ಶನಕ್ಕೆ ಕ್ಷಣಗಣನೆ ಆರಂಭವಾಗಿದ್ದು,ಲಕ್ಷಾಂತರ ಮಂದಿ ಆಗಮಿಸುವ ‌ನಿರೀಕ್ಷೆ ಇದ್ದು ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ.Countdown -Hassanbe -Darshan: -Devotees - Visit

ಹಿಂದೂ ಪಂಚಾಂಗದ ಆಶ್ವೀಜ ಮಾಸದ ಹುಣ್ಣಿಮೆ ನಂತರದ ಮೊದಲ ಗುರುವಾರ ಬಾಗಿಲು ತೆಗೆಯುವುದು ಹಿಂದಿನಿಂದ ಬಂದಿರುವ ಸಂಪ್ರದಾಯ.ಅದೇ ರೀತಿ ಮೈಸೂರು ತಳವಾರ ವಂಶಸ್ತ ಬಾಳೆ ಕಂದು ಕಡಿಯುವ ಮೂಲಕ ಬಾಗಿಲು ತೆಗೆಯಲಾಗುವುದು. ಇಂದು ಮಧ್ಯಾಹ್ನ 12.30ಕ್ಕೆ ಆರ್ದ ನಕ್ಷತ್ರ ಸಮಯದಲ್ಲಿ ಗರ್ಭ ಗುಡಿ ಬಾಗಿಲು ತೆಗೆಯಲು ಸಕಲ ಸಿದ್ದತೆ ಮಾಡಲಾಗಿದೆ.

ಪಂಚಾಗದ ಪ್ರಕಾರ ಇಂದಿನಿಂದ ಬಲಿ ಪಾಡ್ಯಮಿಯ ಮಾರನೆ ದಿನದವರೆಗೆ ದರ್ಶನ ಭಾಗ್ಯ ಲಭಿಸಲಿದ್ದು ಲಕ್ಷಾಂತರ ಮಂದಿ ದರ್ಶನ ಪಡೆಯುವ ನಿರೀಕ್ಷೆ ಇದೆ. ಇಂದಿನಿಂದ ಅಕ್ಟೋಬರ್ 21ರವರೆಗೆ ಹಾಸನಾಂಬೆಯ ಭಕ್ತರಿಗೆ ದರ್ಶನ ನೀಡಲಿದ್ದಾಳೆ. ಆದರೆ ಇಂದು ಮತ್ತು ಕೊನೆಯ ದಿನ ಸಾರ್ವಜನಿಕರಿಗೆ ದರ್ಶನದ ವ್ಯವಸ್ಥೆ ಇರುವುದಿಲ್ಲ. ಈ ಬಾರೀ ದಿನದ 24ಗಂಟೆ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಇಂದು ಬಾಗಿಲು ತೆಗೆದ ನಂತರ ಅಲಂಕಾರ ನೈವೇದ್ಯ ಸೇರಿದಂತೆ ವಿವಿಧ ಕಾರ್ಯಗಳು ನೆರವೇರಲಿದ್ದು, ನಾಳೆ ಬೆಳಿಗ್ಗೆ 5 ಗಂಟೆಯಿಂದ ಹಾಸನಾಂಬೆಯ ಸಾರ್ವಜನಿಕ ದರ್ಶನ ಲಭ್ಯವಾಗಲಿದೆ.

Key words: Countdown -Hassanbe -Darshan: -Devotees – Visit