2028ರ ಲಾಸ್ ಏಂಜಲೀಸ್ ಒಲಿಂಪಿಕ್ಸ್’ಗೆ ಕ್ರಿಕೆಟ್ ಸೇರ್ಪಡೆ !

ಬೆಂಗಳೂರು, ಅಕ್ಟೋಬರ್ 14, 2023 (www.justkannada.in): ಲಾಸ್ ಏಂಜಲೀಸ್​ನಲ್ಲಿ ನಡೆಯಲ್ಲಿರುವ 2028ರ ಒಲಿಂಪಿಕ್ಸ್‌ಗೆ ಕ್ರಿಕೆಟ್ ಸೇರ್ಪಡೆಯಾಗಲಿದೆ.

ಹೌದು, ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ ಅಧ್ಯಕ್ಷ ಥಾಮಸ್ ಬಾಚ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ.

ಈ ಮೂಲಕ 128 ವರ್ಷಗಳ ನಂತರ ಒಲಿಂಪಿಕ್ಸ್‌ಗೆ ಕ್ರಿಕೆಟ್ ಪ್ರವೇಶಿಸಿದ್ದು, ಅಂತರಾಷ್ಟ್ರೀಯ ಒಲಿಂಪಿಕ್ ಸಮಿತಿ ಈ ಮಹತ್ವದ ನಿರ್ಧಾರ ಕೈಗೊಂಡಿದೆ.

ಲಾಸ್ ಏಂಜಲೀಸ್ ಸಮಿತಿಯು 5 ಆಟಗಳನ್ನು ಪ್ರಸ್ತಾಪಿಸಿದೆ. ಈ 5 ಕ್ರೀಡೆಗಳನ್ನು ಒಲಿಂಪಿಕ್ಸ್‌ನಲ್ಲಿ ಸಂಯೋಜಿಸಬಹುದು. ಇದರಲ್ಲಿ ಕ್ರಿಕೆಟ್ ಕೂಡ ಸೇರಿದೆ. ಕಾರ್ಯಕಾರಿ ಮಂಡಳಿ ಸಭೆಯಲ್ಲಿ ಈ ಕುರಿತು ಚರ್ಚಿಸಲಾಗುವುದು ಎಂದು ಐಒಸಿ ಕ್ರೀಡಾ ನಿರ್ದೇಶಕ ಕಿಟ್ ಮೆಕ್‌ಕಾನ್ನೆಲ್ ತಿಳಿಸಿದ್ದಾರೆ.