ರಾಜ್ಯಾದ್ಯಂತ ಇಂದಿರಾ ಕ್ಯಾಂಟೀನ್ ಆರಂಭಿಸಲು ನಿರ್ಧಾರ

0
260

ಬೆಂಗಳೂರು:ಅ-12:(www.justkannada.in) 2018 ಮೇ ನಲ್ಲಿ ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯದ ಎಲ್ಲಾ ಜಿಲ್ಲಾ, ತಾಲೂಕು ಕೇಂದ್ರಗಳು ಹಾಗೂ ಒಂದುಲಕ್ಷಕ್ಕಿಮ್ತಲೂ ಅಧಿಕ ಜನಸಂಖ್ಯೆಯಿರುವ ಪಟ್ಟಣಗಳಿಗಳಲ್ಲೂ ಇಂದಿರಾ ಕ್ಯಾಂಟೀನ್ ಆರಂಭಿಸಲು ನಿರ್ಧರಿಸಿದೆ.

ರಾಜ್ಯದ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲೂ ಹೊಸ ವರ್ಷ ಜನವರಿ 1ರಿಂದ ಇಂದಿರಾ ಕ್ಯಾಂಟೀನ್ ಆರಂಭಿಸಲು ರಾಜ್ಯ ಸಚಿವ ಸಂಪುಟ ಸಭೆ ಸಮ್ಮತಿ ನೀಡಿದೆ. 171 ಸ್ಥಳಗಳಲ್ಲಿನ 246 ಕೇಂದ್ರಗಳಲ್ಲಿ ಕ್ಯಾಂಟೀನ್‍ಗಳು ಆರಂಭವಾಗಲಿದ್ದು, ನವೆಂಬರ್ ತಿಂಗಳ ಅಂತ್ಯದೊಳಗೆ ಸೂಕ್ತ ಸ್ಥಳ ಗುರುತಿಸಬೇಕು, ಡಿಸೆಂಬರ್ ಒಳಗೆ ಮೂಲಸೌಲಭ್ಯಗಳನ್ನು ಕಲ್ಪಿಸುವಂತೆ ಪೌರಾಡಳಿತ ನಿರ್ದೇಶನಾಲಯಕ್ಕೆ ಸೂಚಿಸಲಾಗಿದೆ.

ಈ ಯೋಜನೆಗೆ ಪ್ರತಿ ದಿನ ತಲಾ 29 ಲಕ್ಷದಂತೆ, ಪ್ರತಿ ತಿಂಗಳು ಸುಮಾರು 8.98 ಕೋಟಿ ರೂ ಸಹಾಯ ಧನ ಬಿಡುಗಡೆ ಮಾಡಲು ಸಂಪುಟ ಅನುಮೋದನೆ ನೀಡಿದೆ. ಶ್ರಮಿಕ ವರ್ಗದವರಿಗೆ ರಿಯಾಯಿತಿ ದರದಲ್ಲಿ ಆಹಾರ ನೀಡುವ ಯೋಜನೆ ಇದಾಗಿದ್ದು, ಜನದಟ್ಟಣೆ ಇರುವ ಆಸ್ಪತ್ರೆಗಳ ಆವರಣ, ಬಸ್ ನಿಲ್ದಾಣ ಹಾಗೂ ರೈಲ್ವೆ ನಿಲ್ದಾಣಗಳಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಲು ಸೂಚಿಸಲಾಗಿದೆ ಎಂದು ಸಚಿವ ಟಿ ಬಿ ಜಯಚಂದ್ರ ತಿಳಿಸಿದ್ದಾರೆ.
GOVERNMENT,INDIRA CANTEENS, ACROSS STATE
With an eye at the assembly polls in May 2018, the state cabinet on Wednesday cleared a ‘New Year 2018’ gift to the people of Karnataka. Targetted to woo the working population in tier-2 and tier-3 cities, the Cabinet gave its approval to set up 246 subsidised eateries — to be named Indira canteens — in all the districts and taluk headquarters.