ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ಆರೋಪದ ಬೆನ್ನಲ್ಲೇ ರಾಜ್ಯ ಹೈಕೋರ್ಟ್ ನಲ್ಲೂ ಪೂರಕವಾದ ಘಟನೆ ….

0
414
high-court-raghaveshwara-swamy-prema-latha-rama-katha

 

ಬೆಂಗಳೂರು, ಜ.12, 2018 : (www.justkannada.in news ): ನ್ಯಾಯಾಲಯದಲ್ಲಿ ಎಲ್ಲವೂ ಸರಿಯಿಲ್ಲ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ಆರೋಪಿಸಿದ ಬೆನ್ನಲ್ಲೇ ಕರ್ನಾಟಕ ರಾಜ್ಯ ಹೈಕೋರ್ಟ್ ನಲ್ಲಿ ಶುಕ್ರವಾರ ಈ ಹೇಳಿಕೆಗೆ ಪುಷ್ಠಿ ನೀಡುವಂಥ ಘಟನೆ ನಡೆದಿದೆ.

ರಾಮಕಥಾ ಗಾಯಕಿ ಪ್ರೇಮಲತಾ ಮೇಲೆ ರಾಘವೇಶ್ವರ ಭಾರತೀ ಶ್ರೀಗಳು ಅತ್ಯಾಚಾರವೆಸಗಿದ ಆರೋಪಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿಗಳು ಪದೇ ಪದೇ ಪ್ರಕರಣದ ವಿಚಾರಣೆ ನಡೆಸಲು ಹಿಂದೇಟು ಹಾಕುತ್ತಿರುವುದು ಸರಿಯಷ್ಟೆ. ಈ ಸಂಬಂಧ ಶುಕ್ರವಾರ ನಡೆದ ವಿಚಾರಣೆಯಲ್ಲೂ ಗೌರವಾನ್ವಿತ ನ್ಯಾಯಧೀಶರು ಸದರಿ ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿದಿರುವುದು ಈಗ ಚರ್ಚೆಗೆ ಗ್ರಾಸವಾಗಿದೆ.

ಏನಿದು ಪ್ರಕರಣ :

high-court-raghaveshwara-swamy-prema-latha-rama-katha

ರಾಮಕಥಾ ಗಾಯಕಿ ಪ್ರೇಮಲತಾ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ರಾಘವೇಶ್ವರ ಭಾರತೀ ಶ್ರೀಗಳನ್ನು ಆರೋಪ ಮುಕ್ತ ಗೊಳಿಸಿದ್ದ ಸೆಷನ್ಸ್ ನ್ಯಾಯಾಲಯದ ಆದೇಶ ಪ್ರಶ್ನಿಸಿದ್ದ ಮೇಲ್ಮನವಿ ವಿಚಾರಣೆಯಿಂದ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ಶುಕ್ರವಾರ ಹಿಂದೆ ಸರಿದಿದ್ದಾರೆ.

‘ನಾಲ್ಕು ವರ್ಷಗಳ ಅವಧಿಯಲ್ಲಿ ಸ್ವಾಮೀಜಿ ನನ್ನ ಮೇಲೆ 154 ಬಾರಿ ಅತ್ಯಾಚಾರ ನಡೆಸಿದ್ದಾರೆ’ ಎಂದು ರಾಮಕಥಾ ಗಾಯಕಿ ಮಾಡಿದ್ದ ಆರೋಪ ಪ್ರಕರಣದಲ್ಲಿ ಸ್ವಾಮೀಜಿ ಖುಲಾಸೆಯಾಗಿದ್ದು, ಸೆಷನ್ಸ್‌ ನ್ಯಾಯಾಲಯದ ಈ ತೀರ್ಪನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಲಾಗಿತ್ತು.

Tags : high-court-raghaveshwara-swamy-prema-latha-rama-katha