3ನೇ ಟೆಸ್ಟ್ ಪಂದ್ಯ ಡ್ರಾನಲ್ಲಿ ಅಂತ್ಯ: ಸರಣಿ ವಶಪಡಿಸಿಕೊಂಡ ಕೊಹ್ಲಿ ಪಡೆ….

0
483
india-shrilanka-Kohli- chase –series- 3rd Test

ನವದೆಹಲಿ,ಡಿ,6,2017(www.justkannada.in)  ಶ್ರೀಲಂಕಾ- ಭಾರತ ನಡುವಿನ ಮೂರನೇ ಟೆಸ್ಟ್‌ ಪಂದ್ಯ ಡ್ರಾದಲ್ಲಿ ಅಂತ್ಯಗೊಂಡಿದ್ದು, ಇದರೊಂದಿಗೆ ಮೂರು ಟೆಸ್ಟ್‌‌ ಪಂದ್ಯಗಳ ಸರಣಿಯನ್ನ ಟೀಂ ಇಂಡಿಯಾ 1-0 ಅಂತರದಲ್ಲಿ ತನ್ನ ವಶಮಾಡಿಕೊಂಡಿದೆ.

ದೆಹಲಿಯ ಫಿರೋಷ್‌ ಶಾ ಕೋಟ್ಲಾ ಮೈದಾನದಲ್ಲಿ ನಡೆದ ಮೂರನೇ ಹಾಗೂ ಅಂತಿಮ ಟೆಸ್ಟ್‌‌ ಪಂದ್ಯದಲ್ಲಿ ಭಾರತ ನಾಯಕ ವಿರಾಟ್ ಕೋಹ್ಲಿ ಅವರ ಅಮೋಘ ದ್ವಿಶತಕದ ನೆರವಿನೊಂದಿಗೆ ಮೊದಲ ಇನ್ನಿಂಗ್ಸ್‌ನಲ್ಲಿ ಏಳು ವಿಕೆಟ್ ನಷ್ಟಕ್ಕೆ 536 ರನ್‌ಗಳ ಬೃಹತ್ ಮೊತ್ತ ಪೇರಿಸಿ ಡಿಕ್ಲೇರ್ ಘೋಷಿಸಿತ್ತು.

ಇದಕ್ಕುತ್ತರವಾಗಿ ಲಂಕಾ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 373 ರನ್‌ಗಳಿಗೆ ಸರ್ವಪತನ ಕಾಣುವ ಮೂಲಕ ಭಾರತ 163 ರನ್‌ಗಳ ಮಹತ್ವದ ಮುನ್ನಡೆ ದಾಖಲಿಸಿತ್ತು. ನಂತರ ಎರಡನೇ ಇನ್ನಿಂಗ್ಸ್ ನಲ್ಲಿ ಭಾರತ 246/5 ಡಿಕ್ಲೇರ್ ಮಾಡಿಕೊಂಡಿತ್ತು. 410 ರನ್ ಗಳ ಗುರಿ ಬೆನ್ನತ್ತಿದ ಶ್ರೀಲಂಕಾ ಕೊನೆಯ ದಿನದಾಟಕ್ಕೆ 299ಕ್ಕೆ 5 ವಿಕೆಟ್ ಕಳೆದುಕೊಂಡಿತ್ತು. ಈ ಮೂಲಕ ಪಂದ್ಯ ಡ್ರಾನಲ್ಲಿ ಅಂತ್ಯವಾಗಿದೆ.

Key words:india-shrilanka-Kohli- chase –series- 3rd Test