ಚಿಕ್ಕಮಗಳೂರು,ಏ,20,2017(www.justkannada.in): ಕೆಪಿಸಿಸಿ ಅಧ್ಯಕ್ಷರ ಸ್ಥಾನ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧನಾಗಿರುತ್ತೇನೆ ಎಂದು ಗೃಹ ಸಚಿವೆ ಡಾ.ಜಿ.ಪರಮೇಶ್ವರ್ ಸ್ಪಷ್ಟನೆ  ನೀಡಿದರು.KPCC president -changes -committed –highcommond- decision - Dr. G. Parameshwar ....

ಚಿಕ್ಕಮಗಳೂರಿನಲ್ಲಿ ಇಂದು ಮಾತನಾಡಿದ ಡಾ.ಜಿ. ಪರಮೇಶ್ವರ್, 2018 ರ ಚುನಾವಣೆಯ ಸಾಧಕ ಬಾದಕಗಳನ್ನು ನೋಡಿ ಈ ತೀರ್ಮಾನ ಮಾಡಲಾಗುತ್ತದೆ. ಮುಂದಿನ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ವಿಚಾರ  ಸಂಬಂಧ ಅಭ್ಯರ್ಥಿಗಳ ಆಯ್ಕೆ ವಿಧಾನವನ್ನು ಆಂತರಿಕವಾಗಿ ಮಾಡಲಾಗುತ್ತಿದೆ.ಎಲ್ಲಾ ಕ್ಷೇತ್ರಗಳಲ್ಲಿ ವೀಕ್ಷಕರ ತಂಡ ಪರಿಶೀಲನೆ ನಡೆಸಲಿದೆ.ಬಳಿಕ ಈ ಬಗ್ಗೆ ಸೂಕ್ತ ನಿರ್ಧಾರ ತಗೆದುಕೊಳ್ಳಲಾಗುವುದು. ಅದಕ್ಕೂ ಮೊದಲು ತಾನು ಅಭ್ಯರ್ಥಿ ಎಂದು ಯಾರೂ ಸಹ  ಹೇಳಿಕೊಳ್ಳಬಾರದು ಎಂದು ಸೂಚನೆ ನೀಡಿದರು.

ಸಚಿವ ಸಂಪುಟ ವಿಸ್ತರಣೆ ವಿಚಾರ ಸಿಎಂ ಪರಮಾಧಿಕಾರ…        

ಸಚಿವ ಸಂಪುಟ ವಿಸ್ತರಣೆ ವಿಚಾರ ಸಿಎಂ ಅವರ ಪರಮಾಧಿಕಾರ. ಈ ಬಗ್ಗೆ ಯಾವುದೇ ತೀರ್ಮಾನ ತಗೆದುಕೊಂಡಿಲ್ಲ.ಅದು ಸಿ ಎಂ ವಿವೇಚನೆಗೆ ಬಿಟ್ಟಿದ್ದು ಎಂದರು.

Key words: KPCC president -changes -committed –highcommond- decision – Dr. G. Parameshwar ….