ಮರಕ್ಕೆ ಲಾರಿ ಡಿಕ್ಕಿ; ಲಾರಿಯಲ್ಲಿದ್ದ ಇಬ್ಬರು ಕೂಲಿ ಕಾರ್ಮಿಕರು ಸಾವು…

0
582
Lorry -collides - tree -Two wage- laborers -death.

ಕೋಲಾರ,ಆ,12,2017(www.justkannada.in): ನಿಯಂತ್ರಣ ತಪ್ಪಿ ಲಾರಿ ಮರಕ್ಕೆ ಡಿಕ್ಕಿಯಾಗಿ ಲಾರಿಯಲ್ಲಿದ್ದ ಇಬ್ಬರು ಕೂಲಿ ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ.Lorry -collides - tree -Two wage- laborers -death.

ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ದೊಡ್ಡಕಡತೂರು ಗ್ರಾಮದ ಬಳಿ ಈ ಘಟನೆ ನಡೆದಿದೆ. ಕೂಲಿ ಕಾರ್ಮಿಕರಾದ ರಮೇಶ್ (28),ನಾಗರಾಜ್ (30) ಮೃತಪಟ್ಟವರು. ಕೂಲಿ ಕೆಲಸದವರನ್ನು ಕರೆದುಕೊಂಡು ಹೋಗುತ್ತಿದ್ದ ವೇಳೆ ಲಾರಿ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ. ಘಟನೆಯಲ್ಲಿ ಐದು ಜನ ಗಾಯಗೊಂಡಿದ್ದು ಅವರನ್ನ ಮಾಲೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಕುರಿತು ಮಾಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

key words:Lorry -collides – tree -Two wage- laborers -death.