ಮುರುಡೇಶ್ವರ, ನವೆಂಬರ್ 14 (www.justkannada.in): ಸಚಿವ ಡಿ.ಕೆ.ಶಿವಕುಮಾರ್ ಶೀಘ್ರದಲ್ಲೇ ರಾಜೀನಾಮೆ ಕೊಡುವ ಪರಿಸ್ಥಿತಿ ಬರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಭವಿಷ್ಯ ಹೇಳಿದ್ದಾರೆ.

ಬಿಜೆಪಿ ಕೈಗೊಂಡಿರುವ ಪರಿವರ್ತನಾ rally ಇಂದು ಮುರುಡೇಶ್ವರ ತಲುಪಿದ್ದು, ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್ವೈ, ಐಟಿ ದಾಳಿ ಸೇರಿದಂತೆ ಸಾಕಷ್ಟು ಅವ್ಯವಹಾರ, ಅಕ್ರಮ ಆಸ್ತಿ ಗಳಿಗೆ ಪ್ರಕರಣದಲ್ಲಿ ಡಿಕೆ ಶಿವಕುಮಾರ್ ಸಿಲುಕಿದ್ದಾರೆ. ಮುಂದಿನ ದಿನಗಳಲ್ಲಿ ಅವರೇ ತಾವಾಗಿ ರಾಜೀನಾಮೆ ಕೊಡುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಮುನ್ಸೂಚನೆ ನೀಡಲಿದ್ದಾರೆ.

ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಜಾರ್ಜ್ ರಾಜೀನಾಮೆಗೆ ಬಿಜೆಪಿ ಒತ್ತಾಯಿಸುತ್ತಿದೆ. ಆದರೆ ಡಿಕೆ ಶಿವಕುಮಾರ್ ತಾವಾಗಿಯೇ ರಾಜೀನಾಮೆ ಕೊಡುವ ಪರಿಸ್ಥಿತಿ ಬರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರು ಹೇಳಿದ್ದಾರೆ.