ಮೈಸೂರು,ಫೆಬ್ರವರಿ,13,2018(www.justkannad.in): ಮೊಬೈಲ್ ಚಾರ್ಜಿಂಗ್ ಹಾಕಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಯುವಕ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.mobile-charging-brought-life-power-young-man-dies

ಮೈಸೂರು-ಬನ್ನೂರು ರಸ್ತೆಯಲ್ಲಿರುವ ದೇವೇಗೌಡ ವೃತ್ತದ ಬಳಿ ಘಟನೆ ನಡೆದಿದೆ. ಸಾಗರ್ (೨೦)ಮೃತಪಟ್ಟ ಯುವಕ. ಸಾಗರ್ ಶ್ರೀರಂಗಪಟ್ಟಣದ ತಾಲೂಕಿನ ಬಸವಪುರ ಗ್ರಾಮದ ನಿವಾಸಿಯಾಗಿದ್ದಾನೆ.mobile-charging-brought-life-power-young-man-dies

ಮೈಸೂರಿನಲ್ಲಿ ಗೂಡ್ಸ್ ಆಟೋ ಓಡಿಸುತ್ತಿದ್ದ ಸಾಗರ್ ಸಿಮೆಂಟ್ ಅಂಗಡಿಯೊಂದರಲ್ಲೊ ಮೊಬೈಲ್ ಚಾರ್ಜ್ ಗೆ ಹಾಕಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿದೆ. ತಕ್ಷಣ ಆತನನ್ನು ಕೆ.ಆರ್.ಆಸ್ಪತ್ರೆಗೆ ದಾಖಲಿಸಿದ್ರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.

ಈ ಕುರಿತು ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: Mobile charging- brought – life- Power -young man dies