ಮೈಸೂರಿನಲ್ಲಿ ಜೂನ್ ತಿಂಗಳಲ್ಲೇ 83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳೆನ- ಜಿಲ್ಲಾಧಿಕಾರಿ ಡಿ.ರಂದೀಪ್ ಮಾಹಿತಿ…

0
960
mysore- june-83rd -Kannada Sahitya Sammelan-DC randeep

ಮೈಸೂರು,ಏ,21,2017(www.justkannada.in): 83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ  ಜೂನ್ ತಿಂಗಳಲ್ಲಿ ಮೈಸೂರಿನಲ್ಲಿ ನಡೆಯಲಿದೆ ಎಂದು ಮೈಸೂರು ಜಿಲ್ಲಾಧಿಕಾರಿ ಡಿ.ರಂದೀಪ್ ಮಾಹಿತಿ ನೀಡಿದರು.mysore- june-83rd -Kannada Sahitya Sammelan-DC randeep

ಮೈಸೂರಿನಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಡಿಸಿ ರಂದೀಪ್, ಕಳೆದ ಬಾರಿ 82ನೇ  ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ರಾಯಚೂರಿನಲ್ಲಿ ನಡೆದಿತ್ತು. ಈ ಬಾರಿ 83ನೇ ಅಖಿಲ ಕರ್ನಾಟಕ ಕನ್ನಡ ಸಾಹಿತ್ಯ ಸಮ್ಮೇಳನದ ನೇತೃತ್ವವನ್ನ ಸಾಂಸ್ಕೃತಿಕ ನಗರಿ ಮೈಸೂರು ವಹಿಸಲಿದೆ.ಇದಕ್ಕಾಗಿ ಜಾಗವನ್ನ ಪರಿಶೀಲನೆ ನಡೆಸಲಾಗುತ್ತಿದೆ ಎಂದರು.

ಈ ಸಂಬಂಧ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ ಮಹದೇವಪ್ಪ ಅವರ ಜೊತೆ ಚರ್ಚಿಸಿ ದಿನಾಂಕ ನಿಗದಿಪಡಿಸಲಾಗುತ್ತದೆ ಎಂದು ಡಿ.ರಂದೀಪ್ ಅವರು ತಿಳಿಸಿದರು. ಸುದ್ದಿಗೋಷ್ಠಿ ವೇಳೆ ಶಾಸಕ ಸೋಮಶೇಖರ್ ಉಪಸ್ಥಿತರಿದ್ದರು.

ಕಳೆದ ಬಾರಿ ರಾಯಚೂರಿನಲ್ಲಿ  ಸಾಹಿತ್ಯ ಸಮ್ಮೇಳನ ನಡೆದಿತ್ತು. ಸಾಹಿತಿ ಬರಗೂರು ರಾಮಚಂದ್ರಪ್ಪ ಇದರ ಅಧ್ಯಕ್ಷತೆ ವಹಿಸಿದ್ದರು.

Key words: mysore- june-83rd -Kannada Sahitya Sammelan-DC randeep