ನಮ್ಮ ಮೆಟ್ರೋ ಪ್ರಯಾಣಿಕರಿಂದ ಭರ್ತಿ: ಬೆಂಗಳೂರಿಗರಿಂದ ಸಂಭ್ರಮದಿಂದ ಸಂಚಾರ

0
308

ಬೆಂಗಳೂರು:ಜೂ-19:(www.justkannada.in) ನಮ್ಮ ಮೆಟ್ರೊ ಯೋಜನೆಯ ಮೊದಲ ಹಂತದ ಎಲ್ಲ ಮಾರ್ಗಗಳಲ್ಲಿ ಪೂರ್ಣ ಪ್ರಮಾಣದ ಸಂಚಾರ ಆರಂಭವಾಗಿರುವುದರಿಂದ ಮೊದಲ ದಿನವೇ ಉತ್ತರ–ದಕ್ಷಿಣ ಕಾರಿಡಾರ್‌ನ ರೈಲುಗಳು ಪ್ರಯಾಣಿಕರಿಂದ ತುಂಬಿ ತುಳುಕಿದವು.

ಸಂಜೆ 4 ಗಂಟೆಯಿಂದ ರಾತ್ರಿ 9.30ರ ನಡುವೆ ಉತ್ತರ–ದಕ್ಷಿಣ ಹಾಗೂ ಪೂರ್ವ ಪಶ್ಚಿಮ ಕಾರಿಡಾರ್‌ಗಳಲ್ಲಿ ಒಟ್ಟು 1 ಲಕ್ಷಕ್ಕೂ ಅಧಿಕ ಮಂದಿ ಪ್ರಯಾಣಿಸಿದ್ದಾರೆ ಎಂದು ಬೆಂಗಳೂರು ಮೆಟ್ರೊ ರೈಲು ನಿಗಮದ (ಬಿಎಂಆರ್‌ಸಿಎಲ್‌) ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ವಸಂತ ರಾವ್‌ ತಿಳಿಸಿದ್ದಾರೆ.

ಕಳೆದ ಭಾನುವಾರಕ್ಕೆ ಹೋಲಿಸಿದರೆ ಪ್ರಯಾಣಿಕರ ಸಂಖ್ಯೆ ದ್ವಿಗುಣವಾಗಿದೆ ಎಂದು ಕೆಂಪೇಗೌಡ ರೈಲ್ವೆ ನಿಲ್ದಾಣದ ಅಧಿಕಾರಿಗಳ ಅಭಿಪ್ರಾಯವಾಗಿದೆ.

ಮೊದಲ ಹಂತ ಪೂರ್ಣಗೊಂಡ ಬಳಿಕ ನಿತ್ಯ ಸರಾಸರಿ 5 ಲಕ್ಷ ಮಂದಿ ಪ್ರಯಾಣಿಸುತ್ತಾರೆ ಎಂಬ ನಿರೀಕ್ಷೆ ಇಟ್ಟುಕೊಂಡಿದ್ದೇವೆ. ಇದುವರೆಗೆ ಟಿಕೆಟ್‌ ಮಾರಾಟದ ಮೂಲಕ ನಮ್ಮ ದೈನಂದಿನ ಸರಾಸರಿ ಆದಾಯ 35 ಲಕ್ಷ ಇತ್ತು. ಇದು ಇನ್ನು ಕೆಲವೇ ದಿನಗಳಲ್ಲಿ1 ಕೋಟಿ ದಾಟಬಹುದು ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕ ಪ್ರದೀಪ್‌ ಸಿಂಗ್‌ ಖರೋಲ ಆಶಾವಾದ ವ್ಯಕ್ತಪಡಿಸಿದರು.

Namma metro,passenger,celebrated,journey