ಮುಂದಿನ ಬಾರಿಯೂ ನಮ್ಮ ಪಕ್ಷವೇ ಅಧಿಕಾರಕ್ಕೆ: ನಮ್ಮ ಪಕ್ಷದಿಂದಲೇ ಸ್ಪರ್ಧಿಸಿ- ಜೆಡಿಎಸ್ ಶಾಸಕ ಪಿಳ್ಳಮುನಿಶಾಮಪ್ಪಗೆ ಸಿಎಂ ಸಿದ್ದರಾಮಯ್ಯ ಆಹ್ವಾನ…

0
3678

ಬೆಂಗಳೂರು,ಆ,11,2017(www.justkannada.in): ಮುಂದಿನ ಬಾರಿಯೂ ನಮ್ಮ ಪಕ್ಷವೇ ಅಧಿಕಾರಕ್ಕೆ ಬರಲಿದೆ. ಹೀಗಾಗಿ ನಮ್ಮ ಪಕ್ಷದಿಂದಲೇ ಸ್ಪರ್ಧಿಸಿ ಎಂದು ದೇವನಹಳ್ಳಿ ಜೆಡಿಎಸ್ ಶಾಸಕ ಪಿಳ್ಳಮುನಿಶಾಮಪ್ಪಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಹ್ವಾನ ನೀಡಿದರು.next time -our party –power- Compete- CM Siddaramaiah -MLA Pillamunissamappa

ದೇವನಹಳ್ಳಿಯಲ್ಲಿ ಇಂದು ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಪ್ರಧಾನಿ ಮೋದಿ ಅಮಿತ್ ಶಾ ಅವರ ಮ್ಯಾಜಿಕ್ ನಡೆಯಲ್ಲ. ಮುಂದಿನ ಬಾರಿಯೂ ನಮ್ಮ ಪಕ್ಷವೇ ಗೆಲ್ಲುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

1500 ಕೆರೆಗಳ ಡಿನೋಟಿಪೈ ಮಾಡುವ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಕೆರೆಗಳ ಡಿನೋಟಿಫಿಕೇಷನ್ ಮಾಡುವ ಬಗ್ಗೆ ತೀರ್ಮಾನವೇ ತೆಗೆದುಕೊಂಡಿಲ್ಲ.ಬೆಂಗಳೂರಿನಲ್ಲಿ ತ್ಯಾಜ್ಯ ನೀರನ್ನು ಸಂಸ್ಕರಿಸಿ ಕೆರೆಗಳಿಗೆ ಬಿಡಲಾಗುತ್ತದೆ. ದೇಶದಲ್ಲೇ ಮೊದಲ ಬಾರಿಗೆ ತ್ಯಾಜ್ಯ ನೀರು ಸಂಸ್ಕರಿಸಿ ಕೆರೆಗಳಿಗೆ ಬಿಡುವ ಕೆಲಸಕ್ಕೆ ಕೈ ಹಾಕಿದ್ದೇವೆ ಎಂದರು.

Key words: next time -our party –power- Compete- CM Siddaramaiah -MLA Pillamunissamappa