ಒನ್ ವೇಯಲ್ಲಿ ಬಂದಿದ್ದನ್ನ ಪ್ರಶ್ನಿಸಿದ್ದಕ್ಕೆ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ; ಪ್ರಕರಣ ದಾಖಲು…

0
646
One way- student- questioning -sexual assault

ಬೆಂಗಳೂರು,ಮಾ,20,2017(www.justkannada.in):  ಒನ್ ವೇಯಲ್ಲಿ ಬಂದಿದ್ದನ್ನ ಪ್ರಶ್ನಿಸಿದ್ದಕ್ಕೆ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಆಕೆಯ ಸ್ನೇಹಿತನ ಮೇಲೆ ಹಲ್ಲೆ ನಡೆಸಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.

ನಗರದ ಚಿಕ್ಕಜಾಲದ ಸರ್ವಿಸ್ ರಸ್ತೆಯಲ್ಲಿ ನಿನ್ನೆ ರಾತ್ರಿ ಈ ಘಟನೆ ನಡೆದಿರುವುದು. ಈ ಕುರಿತು ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂತ್ರಸ್ಥ ವಿದ್ಯಾರ್ಥಿನಿ ತನ್ನ ಸ್ನೇಹಿತನೊಂದಿಗೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಇವರ ವಿರುದ್ದ ದಿಕ್ಕಿನಲ್ಲಿ ಬಂದ ದುಷ್ಕರ್ಮಿಯನ್ನ ಪ್ರಶ್ನಿಸಿದ್ದಾರೆ. ಈ ವೇಳೆ ಇಬ್ಬರು ದುಷ್ಕರ್ಮಿಗಳು ವಿದ್ಯಾರ್ಥಿನಿ ಬಳಿಯಿಂದ ಬೈಕ್ ಕೀ ಕಿತ್ತುಕೊಂಡು ಅಸಭ್ಯವಾಗಿ ವರ್ತನೆ ತೋರಿ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ್ದಾರೆ. ಅಲ್ಲದೆ ವಿದ್ಯಾರ್ಥಿನಿ ಸ್ನೇಹಿತನ ಮೇಲೆ ಹಲ್ಲೆ ನಡೆಸಲಾಗಿದೆ.

ಬಳಿಕ ಸ್ಥಳದಲ್ಲಿ 30 ಹಾಗೂ 40 ಜನವಿದ್ದರೂ ಇವರ ನೇರವಿಗೆ ಬಾರದೆ ಮೂಕ ಪ್ರೇಕ್ಷಕರಾಗಿದ್ದಾರೆ. ನಂತರ ವಿದ್ಯಾರ್ಥಿನಿ ಬೈಕ್ ಕೀ ಹೇಗೂ ಕಿತ್ತುಕೊಂಡು ಬಂದು ಚಿಕ್ಕಜಾಲ ಪೊಲೀಸ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Key words: One way- student- questioning -sexual assault