ರಾಜ್ಯದಲ್ಲಿ ದುರ್ಬಲ ಆಡಳಿತದಿಂದ ಬೇಸತ್ತಿರುವ ಜನ: ಈ ಬಾರಿ ಬಿಜೆಪಿಯೇ ಅಧಿಕಾರಕ್ಕೆ ಬರಲಿ- ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ….

0
396
People -tired - weak governance -BJP -power- Amit Shah

ಬೆಂಗಳೂರು, ಆ,12,2017(www.justkannada.in): ಮುಂದಿನ ವಿಧಾನಸಭಾ ಚುನಾವಣೆ ಹಿನ್ನೆಲೆ ರಾಜ್ಯದಲ್ಲಿ ಮೂರು ದಿನಗಳ ಕಾಲ ಪ್ರವಾಸ ಕೈಗೊಂಡು ಬೆಂಗಳೂರಿಗೆ ಬಂದಿಳಿದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ರಾಜ್ಯದಲ್ಲಿ ದುರ್ಬಲ ಆಡಳಿತದಿಂದ ಜನ ಬೇಸತ್ತಿದ್ದಾರೆ. ಹೀಗಾಗಿ ಅವರೆಲ್ಲರಿಗೂ ಬದಲಾವಣೆಯನ್ನು ನಿರೀಕ್ಷಿಸುತ್ತಿದ್ದಾರೆ. ಅದ್ದರಿಂದ ಈ ಬಾರಿ ಕರ್ನಾಟಕದಲ್ಲಿ ಬಿಜೆಪಿಯೇ ಅಧಿಕಾರಕ್ಕೆ ಬರಲಿ ಎಂದು ವಿಶ್ವಾಸ ಮಾತುಗಳನ್ನಾಡಿದರು.People -tired - weak governance -BJP -power- Amit Shah

ನವದೆಹಲಿಯಿಂದ ವಿಸ್ತಾರ್ ವಿಮಾನದ ಮೂಲಕ ಇಂದು ಬೆಂಗಳೂರಿಗೆ ಆಗಮಿಸಿದ ಅಮಿತ್ ಶಾ ಅವರು, ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.

ಅಬ್ ಕೀ ಬಾರ್, ಬಿಜೆಪಿ ಸರ್ಕಾರ್ – ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ರಾಜ್ಯ ಬಿಜೆಪಿ ಕಾರ್ಯಕರ್ತರ ಸಮ್ಮುಖದಲ್ಲಿ ಘೋಷಣೆ ಮಾಡಿದ ಅವರು, ಮುಂದಿನ ವಿಧಾನಸಭೆ ಚುನಾವಣೆ ಹಿನ್ನೆಲೆ ರಾಜ್ಯದಲ್ಲಿರುವ ಎಲ್ಲಾ ಬಿಜೆಪಿ ನಾಯಕರನ್ನು ಭೇಟಿ ಮಾಡುವ ಉದ್ದೇಶದಿಂದ ನಾನು ಬೆಂಗಳೂರಿಗೆ ಬಂದಿದ್ದೇನೆ. ಇಲ್ಲಿನ ಎಲ್ಲಾ ವಿಚಾರಗಳನ್ನೂ ಅಧ್ಯಯನ ಮಾಡಿ, ಮುಂದಿನ ಚುನಾವಣೆಗೆ ಪಕ್ಷವನ್ನು ಹುರಿಗೊಳಿಸುವುದೇ ತಮ್ಮ ಈ ಭೇಟಿಯ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು.

ಇದೇ ವೇಳೆ, ಮುಂದಿನ ಚುನಾವಣೆಯನ್ನು ಯಡಿಯೂರಪ್ಪ ಅವರ ನೇತೃತ್ವದಲ್ಲೇ ಎದುರಿಸಲಾಗುವುದು. ಯಡಿಯೂರಪ್ಪನವರೇ ಮುಂದಿನ ಮುಖ್ಯಮಂತ್ರಿ ಎಂದು ಅಮಿತ್ ಶಾ ಘೋಷಿಸಿದರು.

key words:People -tired – weak governance -BJP -power- Amit Shah