ಅಕ್ರಮ ಗಣಿಗಾರಿಕೆಗೆ ಅನುಮತಿ ನೀಡಲು ಒತ್ತಡ ಆರೋಪ: ಸಿಎಂ ಸಿದ್ದರಾಮಯ್ಯ ವಿರುದ್ದ ಎಸಿಬಿ ಹಾಗೂ ರಾಜ್ಯಪಾಲರಿಗೆ ದೂರು…

0
592
Pressure -illegal mining- Complaint - ACB –against- CM Siddaramaiah

ಬೆಂಗಳೂರು,ಸೆ,19,2017(www.justkannada.in): ಅಕ್ರಮ ಗಣಿಗಾರಿಕೆಗೆ ಅನುಮತಿ ನೀಡಲು ಒತ್ತಡ ಹಾಕಿದ್ದಾರೆಂದು ಆರೋಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಆರ್ ಟಿಐ ಕಾರ್ಯಕರ್ತರೊಬ್ಬರು ಎಸಿಬಿ ಹಾಗೂ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.Pressure -illegal mining- Complaint - ACB –against- CM Siddaramaiah

ಆರ್ ಟಿಐ ಕಾರ್ಯಕರ್ತ ರವೀಂದ್ರ ಅವರು ಸಿಎಂ ಸಿದ್ದರಾಮಯ್ಯ ವಿರುದ್ದ ದೂರು ನೀಡಿದ್ದಾರೆ. ಮಂಡ್ಯ ಜಿಲ್ಲೆ ಪಾಂಡವಪುರದಲ್ಲಿ ಮೈಸೂರು ಮಹಾರಾಜರಿಗೆ ಸೇರಿದ ಅಮೃತ್ ಮಹಲ್ ಜಾಗದಲ್ಲಿ ಅಕ್ರಮ ಗಣಿಗಾರಿಕೆಗಾಗಿ ಅನುಮತಿ ನೀಡಲು ಒತ್ತಡ ಹಾಕಿದ್ದಾರೆ. ಈ ಮೂಲಕ ಅಕ್ರಮ ಗಣಿಗಾರಿಕೆಗೆ ಸಾಥ್ ನೀಡಿದ್ದಾರೆ. ಹೀಗಾಗಿ ಅವರ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ವಿರುದ್ದ ದೂರು ನೀಡಿದ್ದಾರೆ.

ಮೈಸೂರಿನಲ್ಲಿ ಮಂಡ್ಯ ಅಧಿಕಾರಿಗಳ ಜತೆ ಸಭೆ ನಡೆಸಿ ಅಕ್ರಮ ಗಣಿಗಾರಿಕೆ ನಡೆಸಲು ಸಾಥ್ ನೀಡುವಂತೆ ತಿಳಿಸಿದ್ದಾರೆ ಎಂದು ಆರ್ ಟಿಐ ಕಾರ್ಯಕರ್ತ ರವೀಂದ್ರ ಅವರು ಆರೋಪಿಸಿದ್ದಾರೆ.

Key words: Pressure -illegal mining- Complaint – ACB –against- CM Siddaramaiah