ಎನ್ ಡಿಎ ರಾಷ್ಟ್ರಪತಿ ಅಭ್ಯರ್ಥಿಯಾಗಿ ರಾಮನಾಥ್ ಕೋವಿಂದ್ ಆಯ್ಕೆ…

0
578
Ramnath Kovind -elected - NDA -Presidential -candidate

ನವದೆಹಲಿ,ಜೂ.19,2017(www.justkannada.in): ಜುಲೈ 17 ರಂದು ನಡೆಯುವ ರಾಷ್ಟ್ರಪತಿ ಚುನಾವಣೆಗೆ ಎನ್ ಡಿಎ ಅಭ್ಯರ್ಥಿಯಾಗಿ ಬಿಹಾರ ರಾಜ್ಯಪಾಲ ರಾಮನಾಥ್ ಕೋವಿಂದ್ ಅವರನ್ನು ಆಯ್ಕೆ ಮಾಡಲಾಗಿದೆ.Ramnath Kovind -elected - NDA -Presidential -candidate

ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ನೇತೃತ್ವದಲ್ಲಿಂದು ನಡೆದ ಬಿಜೆಪಿ ಸಂಸದೀಯ ಮಂಡಳಿಯ ಸಭೆಯಲ್ಲಿ ಬಿಹಾರ ರಾಜ್ಯಪಾಲ ರಾಮನಾಥ್ ಕೋವಿಂದ್ ಅವರನ್ನು ರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗಿದೆ.

ಸಭೆಯ ನಂತರ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಅಮಿತ್ ಷಾ, ರಾಮನಾಥ್ ಕೋವಿಂದ್ ಅವರನ್ನು ಎನ್ ಡಿಎ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗಿದೆ.ಇದಕ್ಕೆ ಸಭೆಯಲ್ಲಿ ಸಹಮತ ಸಿಕ್ಕಿದೆ ಎಂದು ತಿಳಿಸಿದ್ದಾರೆ. ಎನ್‍ಡಿಎ ಮಿತ್ರ ಪಕ್ಷಗಳು ಒಮ್ಮತ ವ್ಯಕ್ತಪಡಿಸಿವೆ ಎಂದು ಘೋಷಿಸಿದರು.

ಬಿಜೆಪಿ ಸಂಸದೀಯ ಮಂಡಳಿಯ ಸಭೆಯಲ್ಲಿ ಸಚಿವರಾದ ರಾಜನಾಥ್ ಸಿಂಗ್, ಅರುಣ್ ಜೇಟ್ಲಿ , ವೆಂಕಯ್ಯ ನಾಯ್ಡು , ಸುಷ್ಮಾ ಸ್ವರಾಜ್ ಮತ್ತು ನಿತಿನ್ ಗಡ್ಕರಿ ಪಾಲ್ಗೊಂಡಿದ್ದರು. ರಾಮನಾಥ್ ಕೋವಿಂದ್ ಕಾನ್ಪುರ ಮೂಲದವರಾಗಿದ್ದಾರೆ.

key words:Ramnath Kovind -elected – NDA -Presidential -candidate