ಸದಾಶಿವ ವರದಿ ಅನುಷ್ಠಾನಕ್ಕೆ ಕೇಂದ್ರಕ್ಕೆ ಶಿಫಾರಸ್ಸು ಮಾಡಲು ಜ.14 ರಂದು ಮಹತ್ವದ ನಿರ್ಣಯ- ಸಂಸದ ಹೆಚ್. ಮುನಿಯಪ್ಪ 

0
154
recommend - implementation -Sadashiva Report -January 14 -significant decision - MP H. Muniyappa.

ರಾಯಚೂರು,ಜನವರಿ,12,2018(www.justkannada.in): ಸದಾಶಿವ ಆಯೋಗದ ವರದಿ ಅನುಷ್ಠಾನಕ್ಕೆ ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡುವ ಕುರಿತು ಜ.14 ರಂದು ನಡೆಯುವ ಸಭೆಯಲ್ಲಿ ಮಹತ್ವದ ನಿರ್ಣಯ ಹೊರಬೀಳಲಿದೆ ಎಂದು ಸಂಸದ ಹೆಚ್.ಮುನಿಯಪ್ಪ ಹೇಳಿದರು.

ನಗರದ ಮಂತ್ರಾಲಯ ರಸ್ತೆಯಲ್ಲಿರುವ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಎಜೆ ಸದಾಶಿವ ವರದಿ ಜಾರಿಗೆಗೆ ಕೇಂದ್ರಕ್ಕೆ ಶಿಫಾರಸ್ಸು ಮಾಡುವ ಕುರಿತು ರಾಜ್ಯ ಸರಕಾರ ಮಹತ್ವದ ನಿರ್ಣಯ ತೆಗೆದುಕೊಳ್ಳಲಿದೆ. ಹಿಂದುಳಿದ ವರ್ಗದ 101 ಜಾತಿಗಳಿಗೆ ಅನ್ಯಾಯವಾಗದ ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು, ಎಲ್ಲಾ ವರ್ಗದ ಜನರಿಗೂ ಅನ್ಯಾಯವಾಗದ ರೀತಿಯಲ್ಲಿ ಆಯಾ ಸಮಾಜದ ಮುಖಂಡರಿಗೆ ಮನವಿ ಸಲ್ಲಿಸಲಾಗಿದ್ದು, ಹಿಂದುಳಿದ ವರ್ಗದ ಜನಸಂಖ್ಯೆ ಆಧಾರದ ಮೇಲೆ ಸಿಗಬೇಕಾದ ಎಲ್ಲಾ ಸಕಲಸೌಲಭ್ಯಗಳು ನೀಡಲು ಸರಕಾರ ಬದ್ಧವಾಗಿದೆ.

ವರದಿ ಅನುಷ್ಠಾನಕ್ಕೆ ಕೇಂದ್ರಕ್ಕೆ ಶಿಫಾರಸ್ಸು ಮಾಡಲು ಈಗಾಗಲೇ ಲೋಕಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಮನವಿ ಸಲ್ಲಿಸಲಾಗಿದ್ದು, ಜ.14 ರಂದು ನಡೆಯುವ ಸಭೆಯಲ್ಲಿ ಮಹತ್ವದ ನಿರ್ಣಯ ಹೊರಬರಲಿದೆ.

ಎಜೆ ಸದಾಶಿವ ವರದಿ ಅವೈಜ್ಞಾನಿಕ ವರದಿ ಎಂದು ಕೆಲವರು ಹೇಳುತ್ತಿದ್ದು, ಮಾಹಿತಿಯೊಂದಿಗೆ ಸಮಾಲೋಚನೆ ನಡೆಸಿದ್ದಲ್ಲಿ ಅವೈಜ್ಞಾನಿಕವಾಗಿರುವ ವರದಿಯನ್ನು ಕೈಬಿಟ್ಟು ಹಿಂದುಳಿದ ವರ್ಗದ ಅಭಿವೃದ್ಧಿಗೆ ವರದಿಯನ್ನು ಶಿಫಾರಸ್ಸು ಮಾಡಲು ಕ್ರಮಕೈಗೊಳ್ಳಲಾಗುವುದು ಎಂದರು.

key words: recommend – implementation -Sadashiva Report -January 14 -significant decision – MP H. Muniyappa.