ಚಾಮರಾಜನಗರ, ಫೆಬ್ರವರಿ 16 (www.justkannada.in): ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ಚಾಮರಾಜನಗರದಲ್ಲಿ ರಾಜ್ಯ ಮಟ್ಟದ ಪರಿಶಿಷ್ಟ ಜಾತಿ ಮತ್ತು ಪಂಗಡದ ಪತ್ರಕರ್ತರಿಗೆ ಎರಡು ದಿನಗಳ ಕಾರ್ಯಾಗಾರ ಆಯೋಜಿಸಿದ್ದು, ಇಂದು ಚಾಲನೆ ದೊರೆಯಿತು.

ಚಾಮರಾಜನಗರ ದ ನಿಜಗುಣ ರೆಸಿಡೆನ್ಸಿಯಲ್ಲಿ ಆಯೋಜಿಸಿರುವ ಪತ್ರಕರ್ತರ ಕಾರ್ಯಾಗಾರವನ್ನು ಹಿರಿಯ ಪತ್ರಕರ್ತ ಹಾಗೂ ಮುಖ್ಯಮಂತ್ರಿ ಮಾಧ್ಯಮ ಕಾರ್ಯದರ್ಶಿ ಅಮೀನ್ ಮಟ್ಟು ಉದ್ಘಾಟಿಸಿದರು.

ಮಾಧ್ಯಮ ಅಕಾಡೆಮಿ ಅಧ್ಯಕ್ಷ ಸಿದ್ದರಾಜು, ಸದಸ್ಯ ಮುತ್ತುನಾಯ್ಕರ್, ಕಾರ್ಯದರ್ಶಿ ಶಂಕರಪ್ಪ, ಎಸ್ ಸಿ ಎಸ್ ಟಿ ಪತ್ರಿಕೆಗಳ ಸಂಪಾದಕರ ಸಂಘದ ಅಧ್ಯಕ್ಷ ಚಲುವರಾಜು, ಪ್ರಧಾನ ಕಾರ್ಯದರ್ಶಿ ಎನ್. ನಾಗರಾಜ್ ಇತರರು ವೇದಿಕೆಯಲ್ಲಿದ್ದರು.