ಪತ್ರಕರ್ತೆಯರಿಗಾಗಿ ಜ.19ರಂದು ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ ವಿಚಾರ ಸಂಕಿರಣ

0
2560

ಮೈಸೂರು, ಜನವರಿ 12 (www.justkannada.in): ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ‘ವರ್ತಮಾನದ ವಿದ್ಯಾಮಾನಗಳು ಹಾಗೂ ಪತ್ರಕರ್ತೆಯರು’ ವಿಷಯದ ಕುರಿತು ವಿಚಾರ ಸಂಕಿರಣವನ್ನು ಆಯೋಜಿಸಲಾಗಿದೆ.

ಜ.19ರಂದು ಬೆಳಗ್ಗೆ 10.30ಕ್ಕೆ ಬೆಂಗಳೂರಿನ ಕರ್ನಾಟಕ ಆಡಳಿತ ಸೇವಾ ಅಧಿಕಾರಿಗಳ ಸಂಘದ ನಾಲ್ವಡಿ ಕೃಷ್ಣರಾಜ ಒಡೆಯರ್ ಸಭಾಂಗಣದಲ್ಲಿ ವಿಚಾರ ಸಂಕಿರಣ ನಡೆಯಲಿದೆ. ಹಿರಿಯ ಸಾಹಿತಿ ಪ್ರೊ.ಚಂದ್ರಶೇಖರ ಪಾಟೀಲ ಅವರು ವಿಚಾರ ಸಂಕಿರಣಕ್ಕೆ ಚಾಲನೆ ನೀಡಲಿದ್ದಾರೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಾರ್ಯದರ್ಶಿ ಪಿ.ಮಣಿವಣ್ಣನ್, ಆಯುಕ್ತ ಡಾ.ಪಿ.ಎಸ್.ಹರ್ಷ ಪಾಲ್ಗೊಳ್ಳುತ್ತಿದ್ದಾರೆ.

ಹಿರಿಯ ಪತ್ರಕರ್ತೆ ಡಾ.ಆರ್.ಪೂರ್ಣಿಮಾ ಅವರು ಆಶಯ ಭಾಷಣ ಮಾಡಲಿದ್ದು, ಮಾಧ್ಯಮ ಅಕಾಡೆಮಿ ಅಧ್ಯಕ್ಷ ಎಂ.ಸಿದ್ದರಾಜು ಅಧ್ಯಕ್ಷತೆ ವಹಿಸಲಿದ್ದಾರೆ. ಬಳಿಕ ವಿವಿಧ ಗೋಷ್ಠಿಗಳು ನಡೆಯಲಿದ್ದು, ಹಲವು ಪತ್ರಕರ್ತೆಯರು ಪಾಲ್ಗೊಳ್ಳಲಿದ್ದಾರೆ.