ಎಸ್ ಎಸ್ ಎಲ್ ಸಿ ಪರಿಕ್ಷಾರ್ಥಿಗಳೇ ಎಚ್ಚರ: ಈ ಬಾರಿಯಿಂದ ಪರೀಕ್ಷಾ ಕೊಠಡಿಗೆ ಒಂದು ನಿಮಿಷ ತಡವಾಗಿ ಹೋದರೂ ಪ್ರವೇಶ ನಿಷೇಧ

0
65

sslc examಬೆಂಗಳೂರು:ಜ-12: (www.justkannada.in)ಮಾರ್ಚ್‌ ಮತ್ತು ಏಪ್ರಿಲ್‌ನಲ್ಲಿ ನಡೆಯುವ ಪ್ರಸಕ್ತ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ನಿಗದಿತ ಸಮಯಕ್ಕಿಂತ ಒಂದು ನಿಮಿಷ ತಡವಾಗಿ ಹೋದರೂ ಪರೀಕ್ಷೆ ಬರೆಯಲು ಅವಕಾಶ ಸಿಗುವುದಿಲ್ಲ. ಈ ಕುರಿತು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸುತ್ತೋಲೆ ಹೊರಡಿಸಿದೆ.

ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರ ಆದೇಶದ ಮೇರೆಗೆ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿರ್ದೇಶಕಿ ಯಶೋದಾ ಬೋಪಣ್ಣ ಅವರು ಇಂತಹದ್ದೊಂದು ಮಹತ್ವದ ಸುತ್ತೋಲೆ ಹೊರಡಿಸಿದ್ದಾರೆ. ನಿಗದಿತ ದಿನಗಳಲ್ಲಿ ಬೆಳಗ್ಗೆ 9.30ರಿಂದ ಪರೀಕ್ಷೆಗಳು ಆರಂಭವಾಗಲಿದ್ದು, 9.30ರ ನಂತರ ಬರುವ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೊಠಡಿಗೆ ಕಡ್ಡಾಯ ಪ್ರವೇಶ ನಿಷೇಧ ವಿಧಿಸಲಾಗುವುದು ಎಂದು ತಿಳಿಸಿದ್ದಾರೆ.

ಈ ಹಿಂದೆ ಬೆಳಗ್ಗೆ 9.30ಕ್ಕೆ ಪರೀಕ್ಷೆ ಆರಂಭದ ಸಮಯ ಇದ್ದರೂ ಪರೀಕ್ಷೆ ಆರಂಭವಾಗಿ ಅರ್ಧ ಗಂಟೆ ಒಳಗೆ ಅಂದರೆ 10 ಗಂಟೆಯವರೆಗೂ ಪರೀಕ್ಷಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸಿ ಬರೆಯಲು ಅವಕಾಶ ನೀಡಲಾಗುತ್ತಿತ್ತು. ಆದರೆ, 2017ರ ಮಾರ್ಚ್‌ ಮತ್ತು ಏಪ್ರಿಲ್‌ನಲ್ಲಿ ನಡೆಯುವ ಪರೀಕ್ಷೆಯನ್ನು ಇನ್ನಷ್ಟು ಪಾರದರ್ಶಕವಾಗಿ ನಡೆಸಲು ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆಯಂತಹ ಘಟನೆಗಳು ನಡೆಯದಂತೆ ತಡೆಯಲು ಮುನ್ನೆಚ್ಚರಿಕಾ ಕ್ರಮವಾಗಿ ಪರೀಕ್ಷಾ ಅವಧಿ ಆರಂಭವಾದ ನಂತರ ಬರುವ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಪರೀಕ್ಷಾ ಕೊಠಡಿ ಪ್ರವೇಶ ನಿರ್ಬಂಧ ಮಾಡಲಾಗುತ್ತಿದೆ.
SSLC Exam,Karnataka Secondary Education Examination Board,Circular