suprem-court-pm-modi-rit-rejected-sahara-birla

ನವದೆಹಲಿ, ಜ.11, 2017 :(www.justkannada.in news ) ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಲಂಚ ಪಡೆದಿದ್ದಾರೆ ಎಂದು ಆರೋಪಿಸಿ ತನಿಖೆಗೆ ಆದೇಶಿಸುವಂತೆ ಕೋರಿ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಸುಪ್ರೀಂಕೋರ್ಟ್ ಬುಧವಾರ ತಿರಸ್ಕರಿಸಿದೆ.

ಸಹರಾ- ಬಿರ್ಲಾ ಕಂಪೆನಿಗಳಿಂದ ಪ್ರಧಾನಿ ಮೋದಿ ಲಂಚ ಪಡೆದಿದ್ದಾರೆ. ಈ ಆರೋಪ ಕುರಿತು ತನಿಖೆಗೆ ಆದೇಶಿಸಬೇಕೆಂದು ಕೋರಿ ಸ್ವಯಂಸೇವಾ ಸಂಸ್ಥೆಯೊಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು.
ನರೇಂದ್ರ ಮೋದಿ ಅವರು ಸಹರಾ ಮತ್ತು ಬಿರ್ಲಾ ಕಂಪೆನಿಗಳಿಂದ ಲಂಚ ಪಡೆದಿದ್ದಾರೆ ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್‌ ಗಾಂಧಿ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಆರೋಪಿಸಿದ್ದರು.

‘ಪ್ರಧಾನಮಂತ್ರಿಗಳ ವಿರುದ್ಧ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಸಿರುವ ದಾಖಲೆಗಳು ವಿಶ್ವಾಸಾರ್ಹವಾಗಿಲ್ಲ. ಈ ದಾಖಲೆಗಳ ಆಧಾರದಲ್ಲಿ ತನಿಖೆಗೆ ಆದೇಶಿಸಲು ಸಾಧ್ಯವಿಲ್ಲ. ನ್ಯಾಯಾಲಯ ಒಪ್ಪುವಂಥ ಸೂಕ್ತ ದಾಖಲೆಗಳಿದ್ದರೆ ಹಾಜರುಪಡಿಸಿ’ ಎಂದು ಮುಖ್ಯ ನ್ಯಾಯಮೂರ್ತಿ ಜೆ.ಎಸ್‌. ಖೇಹರ್‌ ಅವರಿದ್ದ ನ್ಯಾಯಪೀಠ ಸ್ವಯಂಸೇವಾ ಸಂಸ್ಥೆ ಪರ ವಕೀಲ ಪ್ರಶಾಂತ್‌ ಭೂಷಣ್‌ ಅವರನ್ನು ಕೇಳಿತು.

 

key words : suprem-court-pm-modi-rit-rejected-sahara-birla