ಉತ್ತರ ಪ್ರದೇಶದಲ್ಲಿ ಬಿಎಸ್ ಪಿ ನಾಯಕನನ್ನು ಗುಂಡಿಟ್ಟು ಹತ್ಯೆಗೈದ ದುಷ್ಕರ್ಮಿಗಳು

0
427

ಅಲಹಾಬಾದ್:ಮಾ-20:(www.justkannada.in)ಉತ್ತರ ಪ್ರದೇಶದಲ್ಲಿ ಬಿಎಸ್ ಪಿ ನಾಯಕ ಮೊಹಮ್ಮದ್ ಶಮಿ ಎಂಬುವವರನ್ನು ದುಷ್ಕರ್ಮಿಗಳು ಹತ್ಯೆಗೈದಿದ್ದಾರೆ. ಅಲಹಾಬಾದ್ ನಲ್ಲಿ ಮೊಹಮ್ಮದ್ ಶಮಿ ಅವರ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆಗೈದಿದ್ದಾರೆ.

ಕಳೆದ ರಾತ್ರಿ ಬಹುಜನ ಸಮಾಜ ಪಕ್ಷ ಮುಖಂಡ ಮೊಹಮ್ಮದ್ ಶಮಿ ಅವರು ತಮ್ಮ ಕಛೇರಿಯಿಂದ ಹೊರಬಂದು ಕಾರಿನಬಳಿ ತೆರಳುತ್ತಿದ್ದರು. ಈ ವೇಳೆ ಶಸ್ತ್ರ ಸಜ್ಜಿತ ಆಗಂತಕರಿಬ್ಬರು ಬೈಕ್ ನಲ್ಲಿ ಬಂದು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಗುಂಡೇಟಿಗೆ ಶಮಿ ಕೆಳಗೆ ಬೀಳುತ್ತಿದಂತೆ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

ಅಲಹಾಬಾದ್ ನ ಮೌವ್ ಐಮಾ ಎಂಬಲ್ಲಿ ಮೊಹಮ್ಮದ್ ಶಮಿ ಅವರ ಕಚೇರಿ ಬಳಿ ಕಾರು ಪಾರ್ಕ್ ಮಾಡಿದ್ದ ಸ್ಥಳದಲ್ಲಿ ಈಘಟನೆ ನಡೆದಿದೆ. 60 ವರ್ಷದ ಮೊಹಮ್ಮದ್ ಶಮಿ ಗುಂಡೇಟಿನಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ನಡೆದ ಬಳಿಕ ಸ್ಥಳೀಯರು ಮತ್ತು ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ.

ಉತ್ತರಪ್ರದೇಶದ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ ಅವರು ಪ್ರಮಾಣ ವಚನ ಸ್ವೀಕರಿಸಿದ ಕೆಲ ಘಂತೆಗಳಲ್ಲೇ ಶೂಟೌಟ್ ನಡೆದಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ನೂತನ ಸಿಎಂಗೆ ಸವಾಲಾಗಿದೆ.
Uttar Pradesh, BSP leader, shot dead,Allahabad