ಬೆಂಗಳೂರು,ಜ,12,2017(www.justkannada.in):  ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ನ ಚಟುವಟಿಕೆಯಲ್ಲಿ ಯಾವ ನಾಯಕರೂ ಹಾಗೂ ಕಾರ್ಯಕರ್ತರು ಪಾಲ್ಗೊಳ್ಳುವಂತಿಲ್ಲ. ಪಾಲ್ಗೊಂಡರೇ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಪರಿಷತ್ ವಿಪಕ್ಷ ನಾಯಕ ಕೆಎಸ್ ಈಶ್ವರಪ್ಪಗೆ ಪರೋಕ್ಷ ಟಾಂಗ್ ನೀಡಿದ್ದಾರೆ.workers -brigade,-BJP leader- BS yadiyurappa

ಬೆಂಗಳೂರಿನಲ್ಲಿ ಇಂದು ಮಾತನಾಡಿದ ಬಿಎಸ್ ಯಡಿಯೂರಪ್ಪ, ಬಿಜೆಪಿಗೂ ರಾಯಣ್ಣ ಬ್ರಿಗೇಡ್ ಗೂ ಯಾವುದೇ ಸಂಬಂಧವಿಲ್ಲ.  ಬ್ರಿಗೇಡ್ ಹಾಗೂ ಯಾರ ಬಗ್ಗೆಯೂ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ತಿಳಿಸಿದರು.

ಅಲ್ಲದೆ ಬ್ರಿಗೇಡ್ ಕಾರ್ಯ ಚಟುವಟಿಕೆಯಲ್ಲಿ ಪಾಲ್ಗೊಂಡರೇ ಕ್ರಮ ಜರುಗಿಸುವ ಎಚ್ಚರಿಕೆ ನೀಡಿರುವ ಬಿಎಸ್ ಯಡಿಯೂರಪ್ಪ, ಎಲ್ಲಾ ವಿಚಾರ ಪಕ್ಷದ ನಾಯಕರ ಗಮನದಲ್ಲಿದೆ.ಸೂಕ್ತ ಸಂದರ್ಭದಲ್ಲಿ ಸೂಕ್ತ ನಿರ್ಧಾರವನ್ನ ಕೈಗೊಳ್ಳುತ್ತಾರೆ ಎಂದು ಹೇಳಿದ್ದಾರೆ.

Key words: workers -brigade,-BJP leader- BS yadiyurappa