ಮೈಸೂರು,ಜ,12,2017(www.justkannada.in): ಮನೆಯಲ್ಲಿ ಇದ್ದ ಗನ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ಇಂದು ಬೆಳಿಗ್ಗೆ ನಡೆದಿದೆ.young man- committed -suicide –shot- Mysore

ಮೈಸೂರಿನ ರಾಘವೇಂದ್ರ ನಗರ ನಿವಾಸಿ ಭುವನ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಯುವಕ. ಈತನ ತಂದೆ ರಾಮಣ್ಣ ಮಾಜಿ ಯೋಧರಾಗಿದ್ದಾರೆ. ಯುವಕ ಭುವನ್ ಎನ್ ಐ ಕಾಲೇಜಿನಲ್ಲಿ ಐಟಿಐ ಕಾಲೇಜಿನಲ್ಲಿ ವ್ಯಾಸಾಂಗ ಮಾಡುತ್ತಿದ್ದ ಎನ್ನಲಾಗಿದ್ದು, ಇಂದು ಬೆಳಗಿನ ಜಾವ 5.30ರ ಸುಮಾರಿಗೆ ತನ್ನ ಮನೆಯಲ್ಲಿದ್ದ ರಿವಾಲ್ವರ್ ನಿಂದ ಗುಂಡು ಹಾರಿಸಿಕೊಂಡು ಮೃತಪಟ್ಟಿದ್ದಾನೆ.

ಘಟನೆಗೆ ಯಾವುದೇ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ನಜರ್ ಬಾದ್ ಠಾಣೆಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.  ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: young man- committed -suicide –shot- Mysore