ಕೊಚ್ಚಿ, ನವೆಂಬರ್ 09 (www.justkannada.in): ಅಪಘಾತದಲ್ಲಿ ಎರಡು ಕೈಗಳನ್ನು ಕಳೆದುಕೊಂಡಿದ್ದ ಯುವತಿಗೆ ಯುವಕನೋರ್ವನ ಕೈಗಳನ್ನು ವೈದ್ಯರು ಯಶಸ್ವಿಯಾಗಿ ಜೋಡಿಸಿದ್ದಾರೆ.young-mans-hand-assembled-by-a-woman-who-had-lost-two-hands-in-the-accident

ಉಡುಪಿಯ ಮಣಿಪಾಲ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತಿದ್ದ 19 ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಶ್ರೇಯಾ ಸಿದ್ದನಗೌಡ ಕಳೆದ ವರ್ಷ ನಡೆದ ರಸ್ತೆ ಅಪಘಾತದಲ್ಲಿ ತನ್ನ ಎರಡೂ ಕೈಗಳನ್ನು ಕಳೆದುಕೊಂಡಿದ್ದಳು. ಆದರೆ ಈಗ ಕೇರಳದ ಕೊಚ್ಚಿ ಅಮೃತಾ ವೈದ್ಯ ವಿಜ್ಞಾನ ಸಂಸ್ಥೆಯ ವೈದ್ಯರು ಯುವತಿಗೆ ಯುವಕನ ತೋಳುಗಳನ್ನು ಕಸಿ ಮಾಡಿ ಜೋಡಿಸಿದ್ದಾರೆ.

ಪುಣೆಯ ಟಾಟಾ ಮೋಟರ್ಸ್ ಕಂಪೆನಿಯ ಹಿರಿಯ ವ್ಯವಸ್ಥಾಪಕ ಫಕೀರಗೌಡ ಮತ್ತು ಸುಮಾ ನುಗ್ಗಿಹಳ್ಳಿ ದಂಪತಿಯ ಪುತ್ರಿ ಶ್ರೇಯಾ ಮಣಿಪಾಲ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಕೆಮಿಕಲ್ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದಾರೆ.

ಹಿಂದಿನ ವರ್ಷದಲ್ಲಿ ಒಮ್ಮೆ ಪುಣೆಯಿಂದ ಮಣಿಪಾಲಕ್ಕೆ ಬಸ್‍ನಲ್ಲಿ ಬರುತ್ತಿದ್ದಾಗ ಬಸ್ ಅಪಘಾತಕ್ಕೀಡಾಗಿತ್ತು. ಶ್ರೇಯಾ ಬಸ್ ನ ಕೆಳಗಡೆ ಸಿಲುಕಿದ್ದಳು. ಅಪಘಾತದ ಕಾರಣ ಆಕೆ ತನ್ನ ಎರಡು ಕೈಗಳನ್ನು ಕಳೆದುಕೊಂಡಿದ್ದರು.