ವಿಜಯಪುರ,ಮಾರ್ಚ್,18,2023(www.justkannada.in): ರಾಹುಲ್ ಗಾಂಧಿಗೆ ಉತ್ತರ ಪ್ರದೇಶ ಅಮೇಥಿಯಲ್ಲಿ ಸೋಲಿನ ಅನುಭವವಿದೆ. ಹೀಗಾಗಿ ಸಿದ್ಧರಾಮಯ್ಯಗೆ ಕೋಲಾರದಿಂದ ಸ್ಪರ್ಧಿಸದಂತೆ ಸಲಹೆ ನೀಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಲೇವಡಿ ಮಾಡಿದರು.![]()
ವಿಜಯಪುರದಲ್ಲಿ ಇಂದು ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಉತ್ತರ ಪ್ರದೇಶ ಅಮೇಥಿ ಕ್ಷೇತ್ರದಿಂದ ಸ್ಪರ್ಧಿಸಿ ಗೆಲ್ಲುತ್ತಿದ್ದ ರಾಹುಲ್ ಗಾಂಧಿ ಸೋತಿದ್ದಾರೆ. ಈ ಅನುಭವದ ಆಧಾರದ ಮೇಲೆ ಸಿದ್ಧರಾಮಯ್ಯಗೆ ಕೋಲಾರದಿಂಧ ಸ್ಪರ್ಧೆ ಬೇಡ ಎಂದು ಸಲಹೆ ನೀಡಿದ್ದಾರೆ ಎಂದು ಟೀಕಿಸಿದರು.
ಈಶಾನ್ಯ ಭಾರತದಲ್ಲಿ ಒಂದೂ ಕ್ಷೇತ್ರದಲ್ಲಿ ಕಾಂಗ್ರೆಸ್ ಸಂಸದರಿಲ್ಲ. ಕಾಂಗ್ರೆಸ್ ಅಷ್ಟರ ಮಟ್ಟಿಗೆ ಸೋತು ಸುಣ್ಣವಾಗಿದೆ ಎಂದರು.
Key words: Rahul Gandhi -advises -Siddaramaiah – Amethi -defeat – Union Minister -Prahlad Joshi.







