ಕರ್ನಾಟಕದಲ್ಲಿ  ‘ಜೆಡಿಎಸ್ ಪ್ರಬಲ ರಾಜಕೀಯ ಶಕ್ತಿಯಾಗಿದೆ’ ಎಂದು ಟ್ವೀಟ್ ಮಾಡಿದ ದಿ. ಅನಂತ್ ಕುಮಾರ್ ಅವರ ಪುತ್ರಿ.

 

ಬೆಂಗಳೂರು,ಜುಲೈ,29,2021(www.justkannada.in):  ಬಿಜೆಪಿಯ ಹಿರಿಯ ನಾಯಕರಾಗಿದ್ದ ದಿವಂಗತ ಅನಂತಕುಮಾರ್ ಅವರ ಪುತ್ರಿ ವಿಜೇತಾ ಅವರು ಇದೀಗ ಜೆಡಿಎಸ್ ಪರ ಟ್ವೀಟ್ ಮಾಡಿರುವುದು ಅಚ್ಚರಿಗೆ ಕಾರಣವಾಗಿದೆ.

ಹೌದು, ದಿವಂಗತ ಅನಂತಕುಮಾರ್ ಅವರ ಪುತ್ರಿ ವಿಜೇತಾ, ಕರ್ನಾಟಕದಲ್ಲಿ ಜೆಡಿಎಸ್ ಪಕ್ಷ ಪ್ರಬಲ ರಾಜಕೀಯ ಶಕ್ತಿಯಾಗಿದೆ ಎಂಧು ಟ್ವೀಟ್ ಮಾಡಿದ್ದಾರೆ.

ರಾಜ್ಯ ರಾಜಕೀಯ ನಿಜವಾಗಿಯೂ ಏಕೆ ಆಸಕ್ತಿದಾಯಕವಾಗಿದೆ? ಎಂದು ಸಹ ಪ್ರಶ್ನಿಸಿರುವ ಅವರು, ಜಾತ್ಯತೀತ ಜನತಾದಳ ಪಕ್ಷ ರಾಜ್ಯದಲ್ಲಿ ಇನ್ನೂ ಬಲಿಷ್ಠವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ. ಹಿರಿಯ ಮತ್ತು ಪ್ರಭಾವಿ ಬಿಜೆಪಿ ನಾಯಕರಾಗಿದ್ದ ಅನಂತಕುಮಾರ್ ಅವರ ಪುತ್ರಿಯಾಗಿರುವ ಕಾರಣ ಅವರ ಟ್ವೀಟ್ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಕಾರಣವಾಗುತ್ತಿದೆ.

Key words: JDS –strong- political force – Karnataka. –BJP- Anant Kumar- Daughter