ಕೋಲಾರದಿಂದ ಸ್ಪರ್ಧಿಸದಂತೆ ಸಿದ್ಧರಾಮಯ್ಯಗೆ ರಾಹುಲ್ ಗಾಂಧಿ ಸಲಹೆ…?

ನವದೆಹಲಿ,ಮಾರ್ಚ್,18,2023(www.justkannada.in): ರಾಜ್ಯ ಚುನಾವಣಾ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು ರಾಜಕೀಯ ಪಕ್ಷಗಳು ಸಿದ್ಧತೆಯಲ್ಲಿ ತೊಡಗಿವೆ  ಈ ಮಧ್ಯೆ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕ್ಷೇತ್ರ ಗೊಂದಲ ಮತ್ತೆ ಮುಂದುವರೆದಿದೆ.

ಹೌದು ಕೋಲಾರ ಕ್ಷೇತ್ರದಿಂದ  ಸ್ಪರ್ಧಿಸದಂತೆ ಮಾಜಿ ಸಿಎಂ ಸಿದ್ಧರಾಮಯ್ಯಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲಹೆ ನೀಡಿದ್ದಾರೆ ಎನ್ನಲಾಗಿದೆ.  ಕೋಲಾರ ಕ್ಷೇತ್ರದ ವರದಿಗಳು ನಿಮಗೆ ಸೂಕ್ತ ಎನಿಸುತ್ತಿಲ್ಲ ಮತ್ತೊಮ್ಮೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಿ ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ ಎನ್ನಲಾಗಿದೆ.

ನಿನ್ನೆ ನಡೆದ ಸಿಇಸಿ ಸಭೆಯಲ್ಲಿ ರಾಹುಲ್​ ಗಾಂಧಿ ಅವರು ಸಿದ್ದರಾಮಯ್ಯರಿಗೆ ವರುಣಾ ಕ್ಷೇತ್ರದಿಂದಲೇ ಸ್ಪರ್ಧಿಸುವಂತೆ ಹಾಗೂ ಕೋಲಾರದಿಂದ ಹಿಂದೆ ಸರಿಯುವಂತೆ ಸಲಹೆ ನೀಡಿದ್ದಾರೆ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿದೆ.  ನಿನ್ನೆ ಸಿಇಸಿ ಸಭೆ ಬಳಿಕ ಸಿದ್ಧರಾಮಯ್ಯ ಜೊತೆ ರಾಹುಲ್ ಗಾಂಧಿ 10 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದರು.

ರಾಹುಲ್ ಗಾಂಧಿ ಸಲಹೆ ಕುರಿತು  ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಹೈಕಮಾಂಡ್​ ಹೇಳಿದ ಕ್ಷೇತ್ರದಲ್ಲಿ ನಾನು ಸ್ಪರ್ಧೆ ಮಾಡುತ್ತೇನೆ ಎಂದಿದ್ದಾರೆ. ನಂಜನಗೂಡು ಕ್ಷೇತ್ರದಲ್ಲಿ ಧ್ರುವನಾರಾಯಣ ಪುತ್ರ ಸ್ಪರ್ಧಿಸುತ್ತಾರೆ. ನಾನು ಆರ್​​.ಧ್ರುವನಾರಾಯಣ ಪುತ್ರ ದರ್ಶನ್​​ ಪರ ಇದ್ದೇನೆ. ನಂಜನಗೂಡು ಕ್ಷೇತ್ರದಲ್ಲಿ ಸ್ಪರ್ಧಿಸಲ್ಲವೆಂದು ಮಹದೇವಪ್ಪ ಹೇಳಿದ್ದಾರೆ. ಮಹದೇವಪ್ಪ ಸ್ಪರ್ಧಿಸಲ್ಲ ಎಂದ ಮೇಲೆ ದರ್ಶನ್​ಗೆ ಟಿಕೆಟ್​ ಕೊಡ್ತೀವಿ ಎಂದರು.

Key words: Rahul Gandhi –advises- Siddaramaiah -not -contest – Kolar.