ಗೆಲುವಿನ ಸಂತಸ ಹಂಚಿಕೊಂಡ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರ.

ವಿಜಯಪುರ,ನವೆಂಬರ್,2,2021(www.justkannada.in):  ಸಿಂದಗಿ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರು ಭರ್ಜರಿ ಗೆಲುವು ಸಾಧಿಸಿದ್ದು, ಈ ಬಗ್ಗೆ ರಮೇಶ್ ಭೂಸನೂರು ತಮ್ಮ ಸಂತಸ ಹಂಚಿಕೊಂಡಿದ್ದಾರೆ.

ಬಿಜೆಪಿ ಗೆಲುವಿನ ಬಗ್ಗೆ ಸಂತಸ ಹಂಚಿಕೊಂಡಿರುವ ರಮೇಶ್ ಭೂಸನೂರ, ಜನರ ಅನುಕಂಪ ನನ್ನ ಪರವಾಗಿ ಕೆಲಸ ಮಾಡಿದೆ. ಎಲ್ಲರ ಶ್ರಮದಿಂದ ಗೆಲುವು ಸಾಧಿಸಿದ್ದೇವೆ.ಸಿಂದಗಿಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ತಂತ್ರ ಫಲಿಸಿಲ್ಲ. ಬಿಜೆಪಿಯ ಜನಪರ ಕಾರ್ಯಗಳನ್ನು ಮೆಚ್ಚಿ ಜನರು ಮತ ನೀಡಿದ್ದಾರೆ. ಕ್ಷೇತ್ರದ ಅಭಿವೃದ್ಧಿಗಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದರು.

ಸಿಂದಗಿ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರ 31,088 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ರಮೇಶ್ ಬೂಸನೂರಗೆ 93,380 ಮತಗಳು. ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಮನಗೊಳಿಗೆ 62,292 ಮತಗಳು, ಜೆಡಿಎಸ್ ಅಭ್ಯರ್ಥಿ ನಾಜಿಯಾ ಅಂಗಡಿಗೆ 4321 ಮತಗಳು ಬಿದ್ದಿವೆ.

Key words: sindagi- BJP candidate- Ramesh Bhusanura-won