Friday, September 4, 2026

BDA Apartments

Home Front Page ಗೌರಿ-ಗಣೇಶ ಹಬ್ಬ ಹಿನ್ನೆಲೆ: ಕೆಎಸ್ ಆರ್ ಟಿಸಿಯಿಂದ 2,500 ಹೆಚ್ಚುವರಿ ಬಸ್‌  

ಗೌರಿ-ಗಣೇಶ ಹಬ್ಬ ಹಿನ್ನೆಲೆ: ಕೆಎಸ್ ಆರ್ ಟಿಸಿಯಿಂದ 2,500 ಹೆಚ್ಚುವರಿ ಬಸ್‌  

ಬೆಂಗಳೂರು,ಸೆಪ್ಟಂಬರ್,4,2026 (www.justkannada.in):  ಗೌರಿ-ಗಣೇಶ ಹಬ್ಬದ ಸಮೀಪಿಸುತ್ತಿದ್ದು  ಈ  ಹಿನ್ನೆಲೆಯಲ್ಲಿ ನಗರದಿಂದ ತಮ್ಮ ತಮ್ಮ ಊರುಗಳಿಗೆ ತೆರಳುವ ಪ್ರಯಾಣಿಕರಿಗೆ ಕೆಎಸ್ ಆರ್ ಟಿಸಿ ಗುಡ್ ನ್ಯೂಸ್ ನೀಡಿದೆ.

ಪ್ರಯಾಣಿಕರ ಅನುಕೂಲಕ್ಕಾಗಿ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಿದೆ. ಹಬ್ಬ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ರಾಜ್ಯದ ವಿವಿಧ ಜಿಲ್ಲೆಗಳು ಮತ್ತು ಹೊರರಾಜ್ಯದ ಪ್ರಮುಖ ನಗರಗಳಿಗೆ ಹೆಚ್ಚುವರಿ ಬಸ್‌ಗಳು ಸಂಚರಿಸಲಿವೆ.

ಸೆಪ್ಟೆಂಬರ್‌ 14ರಂದು ಗೌರಿ-ಗಣೇಶ ಹಬ್ಬವಿದ್ದು,  ಇದಕ್ಕೂ ಮುನ್ನ ಸೆಪ್ಟೆಂಬರ್‌ 12ರಂದು ಎರಡನೇ ಶನಿವಾರ ಹಾಗೂ 13ರಂದು ಭಾನುವಾರ ರಜೆ ಇರುವುದರಿಂದ ಹೆಚ್ಚಿನ ಸಂಖ್ಯೆಯ ಜನರು ಊರುಗಳತ್ತ ತೆರಳುವ ಸಾಧ್ಯತೆ ಇದೆ.  ಹೀಗಾಗಿ ಸೆಪ್ಟೆಂಬರ್‌ 11ರಿಂದ 13ರವರೆಗೆ ಬೆಂಗಳೂರಿನಿಂದ ವಿವಿಧ ಮಾರ್ಗಗಳಿಗೆ ಸುಮಾರು 2,400 ವಿಶೇಷ ಬಸ್‌ ಗಳ ಕಾರ್ಯಾಚರಣೆ ಮಾಡಲು  ಕೆಎಸ್ ಆರ್ ಟಿಸಿ ಮುಂದಾಗಿದೆ ಎನ್ನಲಾಗಿದೆ.

ಪ್ರಯಾಣಿಕರ ದಟ್ಟಣೆ ಕಡಿಮೆ ಮಾಡಲು ಬೆಂಗಳೂರಿನ ಪ್ರಮುಖ ಬಸ್‌ ನಿಲ್ದಾಣಗಳಿಂದ ವಿವಿಧ ಮಾರ್ಗಗಳಿಗೆ ವಿಶೇಷ ಬಸ್‌ಗಳನ್ನು ನಿಯೋಜಿಸಲಾಗಿದೆ.

ಕೆಂಪೇಗೌಡ ಬಸ್‌ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ ಸೇರಿದಂತೆ ಹಲವು ಜಿಲ್ಲೆ ಹಾಗೂ ಪ್ರಮುಖ ಸ್ಥಳಗಳಿಗೆ ಬಸ್‌ಗಳು ತೆರಳಲಿವೆ. ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್‌ ಸೇರಿದಂತೆ ಉತ್ತರ ಕರ್ನಾಟಕದ ಮಾರ್ಗಗಳಿಗೂ ವಿಶೇಷ ಬಸ್‌ಗಳ ವ್ಯವಸ್ಥೆ ಇದೆ.

ಇದರ ಜೊತೆಗೆ ತಿರುಪತಿ, ವಿಜಯವಾಡ, ಹೈದರಾಬಾದ್‌ ಸೇರಿದಂತೆ ಹೊರರಾಜ್ಯದ ಪ್ರಮುಖ ನಗರಗಳಿಗೂ ಬಸ್‌ಗಳು ಸಂಚರಿಸಲಿವೆ.

ಮೈಸೂರು ರಸ್ತೆ ಸ್ಯಾಟಲೈಟ್‌ ಬಸ್‌ ನಿಲ್ದಾಣದಿಂದ  ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ ಮತ್ತು ಮಡಿಕೇರಿ ಮಾರ್ಗಗಳಿಗೆ ಇಲ್ಲಿಂದ ವಿಶೇಷ ಬಸ್‌ಗಳು ಹೊರಡಲಿವೆ.

Key words: Gauri-Ganesh festival, 2,500 additional, buses ,KSRTC