Saturday, August 22, 2026

BDA Apartments

Home Front Page ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಹರಕೆ ತೀರಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್.

ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಹರಕೆ ತೀರಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್.

ಮೈಸೂರು,ಜೂನ್,24,2023(www.justkannada.in):  ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಇಂದು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ನಾಡಿನ ಅಧಿದೇವತೆ ತಾಯಿ ಚಾಮುಂಡೇಶ್ವರಿ  ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಸಚಿವೆಯಾದ ಬಳಿಕ ಇದೇ ಮೊದಲ ಬಾರಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ದೇಗುಲದ ಆಡಳಿತ ಮಂಡಳಿಯಿಂದ ಸ್ವಾಗತ ಕೋರಿದರು. ನಂತರ ಲಕ್ಷ್ಮಿ ಹೆಬ್ಬಾಳ್ಕರ್‌ ನಾಡಿನ ಅಧಿದೇವತೆ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದುಕೊಂಡು ವಿಶೇಷ ಪೂಜೆ ಸಲ್ಲಿಸಿದರು. ಸಚಿವೆ ಲಕ್ಷ್ಮಿಹೆಬ್ಬಾಳ್ಕರ್ ಗೆ ಅರ್ಚಕರು ಪ್ರಸಾದ ವಿತರಣೆ ಮಾಡಿದರು.

ಬಳಿಕ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್,  ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿ ಎಂದು ಚಾಮುಂಡಿ ತಾಯಿಯಲ್ಲಿ ಹರಕೆ ಕಟ್ಟಿದ್ಧೆ. ಈಗ ಅಧಿಕಾರಕ್ಕೆ ಬಂದಿದ್ದೇವೆ. ಹೀಗಾಗಿ ಚಾಮುಂಡಿಬೆಟ್ಟಕ್ಕೆ ಬಂದು ಹರಕೆ ತೀರಿಸಿದ್ದೇನೆ. ರಾಜ್ಯದಲ್ಲಿ ಒಳ್ಳೆಯ ಮಳೆಯಾಗಲಿ ಎಂದು ಈಗ ದೇವಿಯನ್ನು ಸೆರೆಗೊಡ್ಡಿ ಬೇಡಿಕೊಂಡಿದ್ದೇನೆ ಎಂದರು.

Key words: Minister -Lakshmi Hebbalkar – visit – Chamundi Hill