Thursday, August 13, 2026

BDA Apartments

Home Front Page ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಶಾಸಕ ಕೆ.ಎಸ್ ಈಶ್ವರಪ್ಪ.

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಶಾಸಕ ಕೆ.ಎಸ್ ಈಶ್ವರಪ್ಪ.

ಶಿವಮೊಗ್ಗ,ಏಪ್ರಿಲ್,11,2023(www.justkannada.in):   ರಾಜ್ಯ ವಿಧಾನಸಭೆ ಚುನಾವಣೆ ಸಮೀಪಸುತ್ತಿದ್ದು ಇಂದು ಅಥವಾ ನಾಳೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ. ಈ ಮಧ್ಯೆ  ಬಿಜೆಪಿಯ ಹಿರಿಯ ನಾಯಕ  ಮಾಜಿ ಡಿಸಿಎಂ ಕೆಎಸ್​ ಈಶ್ವರಪ್ಪ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.

ಈ  ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಪತ್ರ ಬರೆದಿರುವ ಶಾಸಕ ಕೆ.ಎಸ್ ಈಶ್ವರಪ್ಪ, ತಾನು ಸ್ವಯಂ ನಿವೃತ್ತಿ ಘೋಷಣೆ ಮಾಡುತ್ತಿದ್ದೇನೆ. ಈ ಬಾರಿಯ ಚುನಾವಣೆಯಲ್ಲಿ ಯಾವುದೇ ಕ್ಷೇತ್ರಕ್ಕೆ ನನ್ನ ಹೆಸರನ್ನು ಪರಿಗಣಸಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

ನಾನು ಸ್ವ-ಇಚ್ಛೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತನಾಗಲು ಬಯಸಿದ್ದೇನೆ. ಹಾಗಾಗಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನನ್ನ ಹೆಸರನ್ನು ಯಾವುದೇ ಕ್ಷೇತ್ರಕ್ಕೆ ಪರಿಗಣಿಸಬಾರದು. ನಾನು ಕಳೆದ 40ಕ್ಕೂ ಹೆಚ್ಚು ವರ್ಷದ ರಾಜಕೀಯ  ಮಾಡಿದ್ದೇನೆ. ಜೀವನದಲ್ಲಿ ಬೂತ್ ಮಟ್ಟದಿಂದ ರಾಜ್ಯದ ಉಪ ಮುಖ್ಯಮಂತ್ರಿಯವರೆಗೆ ಗೌರವದ ಸ್ಥಾನಮಾನಗಳನ್ನು ನೀಡಿದ ಪಕ್ಷದ ಹಿರಿಯರಿಗೆ ನನ್ನ ಅನಂತ ಧನ್ಯವಾದಗಳು ಎಂದು ಪತ್ರದಲ್ಲಿ ತಿಳಿಸಿದ್ದಾರೆ.

Key words: MLA -KS Eshwarappa -announced -his retirement – electoral politics.