Wednesday, September 9, 2026

BDA Apartments

Home Front Page ತೃತೀಯ ಭಾಷೆಗೆ ಗ್ರೇಡ್ ಬದಲಿಗೆ ಅಂಕ ನೀಡಲು ಕೋರ್ಟ್ ಆದೇಶ ಹಿನ್ನೆಲೆ: ಸಿಎಂ ಜೊತೆ ಸಚಿವ...

ತೃತೀಯ ಭಾಷೆಗೆ ಗ್ರೇಡ್ ಬದಲಿಗೆ ಅಂಕ ನೀಡಲು ಕೋರ್ಟ್ ಆದೇಶ ಹಿನ್ನೆಲೆ: ಸಿಎಂ ಜೊತೆ ಸಚಿವ ಮಧು ಬಂಗಾರಪ್ಪ ಚರ್ಚೆ

ಬೆಂಗಳೂರು,ಏಪ್ರಿಲ್,22,2026 (www.justkannada.in): ತೃತೀಯ ಭಾಷೆಗೆ ಗ್ರೇಡ್ ಬದಲಿಗೆ ಅಂಕ ನೀಡಲು ಹೈಕೋರ್ಟ್ ಆದೇಶ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಅವರನ್ನು  ಶಿಕ್ಷಣ ಸಚಿವ ಮಧು ಬಂಗಾರಪ್ಪ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.

ಸಿಎಂ ಅಧಿಕೃತ ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು  ಶಿಕ್ಷಣ ಸಚಿವ ಮಧು ಬಂಗಾರಪ್ಪ ಭೇಟಿಯಾಗಿ ಚರ್ಚಿಸುತ್ತಿದ್ದಾರೆ. ಕೋರ್ಟ್ ಆದೇಶ ಹಿನ್ನೆಲೆ ಸರ್ಕಾರದ ಮುಂದಿನ ಕ್ರಮದ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ. ಈ ವೇಳೆ ಶಾಲಾ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ ಹಾಗೂ ಇಲಾಖೆಯ ಅಧಿಕಾರಿಗಳು ಭಾಗಿಯಾಗಿದ್ದಾರೆ.

ಮುಂದಿನ ನಿರ್ಧಾರ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಲಾಗುತ್ತಿದೆ. ಹೈಕೋರ್ಟ್ ಏಕ ಸದಸ್ಯ ಪೀಠದ ವಿರುದ್ದ ಮೇಲ್ಮನವಿ ಹೋಗುವ ವಿಚಾರದ ಬಗ್ಗೆ ಚರ್ಚೆಯಾಗುತ್ತಿದೆ. ಅಂಕದ ಜೊತೆ ಗ್ರೇಡ್ ಕೂಡ ತೃತೀಯ ಭಾಷೆಗೆ ಕೊಡೋ ಬಗ್ಗೆ ಸಿಎಂ, ಸಚಿವರು ಚರ್ಚೆ ಮಾಡುತ್ತಿದ್ದಾರೆ ಎನ್ನಲಾಗಿದೆ.

Key words: court, order, third language, Madhu Bangarappa, discusses, CM