ದೇಶದಲ್ಲಿ ತಗ್ಗಿದ ಕೊರೋನಾ: ಕಳೆದ 24 ಗಂಟೆಯಲ್ಲಿ 15,823 ಕೋವಿಡ್ ಪ್ರಕರಣ ಪತ್ತೆ

ನವದೆಹಲಿ,ಅಕ್ಟೋಬರ್,13,2021(www.justkannada.in):  ದೇಶದಲ್ಲಿ ಕೊರೋನಾ ಆರ್ಭಟ ತಗ್ಗುತ್ತಿದ್ದು, ಈ ನಡುವೆ ಕಳೆದ 24 ಗಂಟೆಯಲ್ಲಿ 15,823 ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ.

ಈ ಕುರಿತು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಒಂದೇ ದಿನದಲ್ಲಿ ಹೊಸದಾಗಿ 15,823 ಮಂದಿಗೆ ಕೊರೋನಾ ಸೋಂಕು ತಗುಲಿದ್ದು ಈ ಮೂಲಕ ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 3,40,01,743ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ ಕೊರೋನಾದಿಂದ ಸಾವನ್ನಪ್ಪುವವರ ಸಂಖ್ಯೆಯಲ್ಲಿಯೂ ಇಳಿಮುಖವಾಗಿದ್ದು, ಕಳೆದ 24 ಗಂಟೆಯಲ್ಲಿ 226 ಜನ  ಕೋವಿಡ್ ಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 4,51,189 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 207653 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 22844 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 3,33,42,901 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ಕಳೆದ 24 ಗಂಟೆಯಲ್ಲಿ 50,63,845 ಜನರಿಗೆ ಲಸಿಕೆ ನೀಡಲಾಗಿದ್ದು ಈ ಮೂಲಕ ದೇಶದಲ್ಲಿ ಈವರೆಗೆ ಒಟ್ಟು 96,43,79,212 ಜನರಿಗೆ ಕೋವಿಡ್ ವ್ಯಾಕ್ಸಿನ್ ನೀಡಲಾಗಿದೆ.

Key words: Corona – country –diminished- 15,823 Covid case -detected – last 24 hours