ನಂದಿನಿ ತುಪ್ಪ ಕಲಬೆರಕೆ ಹಗರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಒತ್ತಾಯಿಸಿ ರಾಜ್ಯ ರೈತಸಂಘ ಪ್ರತಿಭಟನೆ‌

 

ಮೈಸೂರು,ಡಿಸೆಂಬರ್,30,2021(www.justkannada.in): ನಂದಿನಿ ತುಪ್ಪ ಕಲಬೆರಕೆ ಹಗರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಒತ್ತಾಯಿಸಿ ರಾಜ್ಯ ರೈತಸಂಘದಿಂದ ಪ್ರತಿಭಟನೆ‌ ನಡೆಸಲಾಯಿತು.

ಮೈಸೂರು ಜಿಲ್ಲಾಧಿಕಾರಿ ಕಚೇರಿ ಬಳಿ ಕರ್ನಾಟಕ ರಾಜ್ಯ ರೈತಸಂಘ  ಧರಣಿ ನಡೆಸಿತು. ಮೈಸೂರು ಜಿಲ್ಲೆಯ ವಿವಿಧೆಡೆಗಳಿಂದ ಆಗಮಿಸಿರುವ ನೂರಾರು ರೈತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.  ಡೈರಿಗಳಲ್ಲಿ ಕಚ್ಚಾ ಹಾಲು ಮಾರಾಟಕ್ಕೆ ನಿರ್ಬಂಧ ವಿಧಿಸಿರುವುದಕ್ಕೆ ಖಂಡಿಸಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ನಂದಿನಿ ತುಪ್ಪ ಕಲಬೆರಕೆ ಪ್ರಕರಣದಲ್ಲಿ ಕೆಎಂಎಫ್ ನ ಅಧಿಕಾರಿಗಳು, ಸಿಬ್ಬಂದಿಗಳು ಭಾಗಿಯಾಗುರುವ ಸಂಶಯವಿದೆ. ಹಾಗಾಗಿ ಕೆಎಂಎಫ್ ಅಧಿಕಾರಿಗಳನ್ನು ಅಮಾನತು ಮಾಡಬೇಕು. ಡೈರಿಗಳಲ್ಲಿ ಕಚ್ಚಾ ಹಾಲು ಮಾರಾಟಕ್ಕೆ ವಿಧಿಸಿರುವ ನಿರ್ಬಂಧವನ್ನು ತೆರವುಗೊಳಿಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ಆರಂಭಿಸುತ್ತೇವೆ ಎಂದು  ರಾಜ್ಯ ರೈತಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಹೇಳಿದರು.

Key words: State -farmers-‘ union -protest -mysore