Thursday, August 13, 2026

BDA Apartments

Home Cinema ನಟ ಅಪ್ಪು ನಿಧನಕ್ಕೆ ಮೈಸೂರು ರಾಜವಂಶಸ್ಥ ಯದುವೀರ್ ಸಂತಾಪ.

ನಟ ಅಪ್ಪು ನಿಧನಕ್ಕೆ ಮೈಸೂರು ರಾಜವಂಶಸ್ಥ ಯದುವೀರ್ ಸಂತಾಪ.

ಮೈಸೂರು,ಅಕ್ಟೋಬರ್,29,2021(www.justkannada.in):  ನಟ  ಪವರ್ ಸ್ಟಾರ್ ಪುನೀತ್ ರಾಜ್‍ ಕುಮಾರ್ ನಿಧನಕ್ಕೆ ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸಂತಾಪ ಸೂಚಿಸಿದ್ದಾರೆ.

ಪುನೀತ್ ರಾಜ್ ಕುಮಾರ್ ಕನ್ನಡ ಚಿತ್ರರಂಗದಲ್ಲಿ ಮೇರು ವ್ಯಕ್ತಿತ್ವದ ನಟರಾಗಿದ್ರು. ಅವರು ನಮ್ಮೆಲ್ಲರನ್ನೂ ಅಗಲಿದ್ದು ಅತೀವ ದುಃಖವನ್ನುಂಟು ಮಾಡಿದೆ. ಜಗನ್ಮಾತೆಯಾದ ಶ್ರೀ ಚಾಮುಂಡೇಶ್ವರಿ ದೇವಿಯು ಅವರ ಆತ್ಮಕ್ಕೆ ಶಾಂತಿಯನ್ನು ದಯಪಾಲಿಸಲಿ. ಅವರ ಕುಟುಂಬದವರಿಗೆ, ಸ್ನೇಹಿತರಿಗೆ, ಎಲ್ಲಾ ಕನ್ನಡ ಚಿತ್ರರಂಗದವರಿಗೆ ಹಾಗು ಅವರ ಅಪಾರ ಅಭಿಮಾನಿಗಳಿಗೆ ಅವರ ಅಗಲಿಕೆಯ ನೋವನ್ನು ಭರಿಸುವ ದಯಪಾಲಿಸಲಿ ಎಂದು ಸಾಮಾಜಿಕ ಜಾಲತಾಣದಲ್ಲಿ ಯದುವೀರ್ ಸಂತಾಪ ಸೂಚಿಸಿದ್ದಾರೆ.

Key words: Mysore- Yadavir -condoles – death -actor –punith raj kumar