ನೆರೆ ಪರಿಹಾರಕ್ಕಾಗಿ ಸಿಎಂ ಸರ್ವಪಕ್ಷ ನಿಯೋಗ ಕರೆದೊಯ್ಯಲಿ- ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಆಗ್ರಹ.

ಬೆಳಗಾವಿ,ಆಗಸ್ಟ್,6,2021(www.justkannada.in): ಕೇಂದ್ರ ಸರ್ಕಾರಕ್ಕೆ ನೆರೆ ಪರಿಹಾರ ನೀಡುವ ಯೋಜನೆ ಇಲ್ಲ. ನೆರೆಪರಿಹಾರ ಕೇಳಲು ಸಿಎಂ ಬಸವರಾಜ ಬೊಮ್ಮಾಯಿ ಸರ್ವಪಕ್ಷ ನಿಯೋಗ ಕರೆದೊಯ್ಯಲಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಆಗ್ರಹಿಸಿದ್ದಾರೆ.

ಮಾಧ್ಯಮಗಳ ಜತೆ ಇಂದು ಮಾತನಾಡಿದ ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ್ ಜಾರಕಿಹೊಳಿ, ರಾಜ್ಯದಲ್ಲಿ ಭಾರಿ ಮಳೆಯಿಂದಾಗಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಆದರೆ ಕೇಂದ್ರ ಸರ್ಕಾರ ನೆರೆಪರಿಹಾರ ನೀಡಲು ಹಿಂದೇಟು ಹಾಕುತ್ತಿದೆ.  ನಾವು ಪ್ರಧಾನಿ ಮೇಲೆ ಒತ್ತಡ ಹೇರಲು ಸಿದ್ಧ. ಹೀಗಾಗಿ ಸಿಎಂ ಸರ್ವಪಕ್ಷ ನಿಯೋಗ ಕರೆದೊಯ್ಯಲಿ ಎಂದು ಒತ್ತಾಯಿಸಿದರು.There-grouping-all-parties-That's-not-new-KPCC president-Sathisha Zarakihulli

ಹೊಸ ಸಂಪುಟ ರಚನೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸತೀಶ್ ಜಾರಕಿಹೊಳಿ, ಹೊಸ ಸಂಪುಟದಲ್ಲಿ 20 ಹಳೆಯ ಮಂತ್ರಿಗಳು ಇದ್ಧಾರೆ. ಇವರಿಂದ ಏನು ನಿರೀಕ್ಷೆ ಮಾಡಲು ಆಗುವುದಿಲ್ಲ. ಸಿಎಂ ಬದಲಾವಣೆಯಿಂದ ಲಾಭವೂ ಇಲ್ಲ. ನಷ್ಟವೂ ಇಲ್ಲ ಎಂದು ಲೇವಡಿ ಮಾಡಿದರು.

Key words: CM -call – all-party – Delegation-  KPCC president -Sathish Jarakiholi