ಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ 15 ಸ್ಥಾನ ಖಚಿತ- ಮಾಜಿ ಸಿಎಂ ಬಿಎಸ್ ವೈ ವಿಶ್ವಾಸ.

ಶಿವಮೊಗ್ಗ,ನವೆಂಬರ್,27,2021(www.justkannada.in): ಡಿಸೆಂಬರ್ 10 ರಂದು ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ನ 25 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿಗೆ 15 ಸ್ಥಾನ ಸಿಗಲಿದೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಶಿವಮೊಗ್ಗದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಬಿಎಸ್ ಯಡಿಯೂರಪ್ಪ,  ನಾವು 25ರಲ್ಲಿ 20 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದೇವೆ, 15 ಕ್ಷೇತ್ರಗಳಲ್ಲಿ ನಮ್ಮ ಗೆಲುವು ಖಚಿತ  ನಮಗೆ ವಿಧಾನ ಪರಿಷತ್ ನಲ್ಲಿ ಬಹುಮತ ಸಿಗುತ್ತದೆ. ಯಾರ ಮೇಲೂ ಅವಲಂಬಿತರಾಗುವ ಅಗತ್ಯವಿಲ್ಲ ಎಂದರು.

ಹಿಂದೆ ವಿಧಾನ ಪರಿಷತ್ ಗೆ ಕಾಂಗ್ರೆಸ್ ನಿಂದ ಯಾವುದೇ ಅಭ್ಯರ್ಥಿ ಹಾಕಿದರೂ ಪ್ರಚಾರ ಮಾಡದೇ ಗೆಲ್ಲುವು ಕಾಲವೊಂದಿತ್ತು. ಆದರೆ, ಬಿಜೆಪಿ ದೊಡ್ಡ ಪಕ್ಷವಾಗಿ ಬೆಳೆದಿದ್ದು, ಎಲ್ಲೆಡೆ ಪ್ರಧಾನಿ ಮೋದಿ ಅವರ ಅಭಿವೃದ್ದಿ ಅಲೆ ಇದೆ. ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲುವುದೇ ಕಷ್ಟ ಎನ್ನುವ ಪರಿಸ್ಥಿತಿ ಇದೆ ಎಂದರು.

ಜೆಡಿಎಸ್ ಎಲ್ಲಿ ಅಭ್ಯರ್ಥಿಗಳನ್ನು ಹಾಕಿಲ್ಲವೋ ಅಲ್ಲಿ ಬಿಜೆಪಿ ಅಭ್ಯರ್ಥಿಗಳಿಗೆ ಬೆಂಬಲ ನೀಡಿ ಎಂದು ಜೆಡಿಎಸ್ ನಾಯಕರನ್ನು ಕೇಳಿದ್ದೇನೆ, ಜೆಡಿಎಸ್ ಅಭ್ಯರ್ಥಿಗಳು ಇಲ್ಲದಿರುವ ಕಡೆ  ಬೆಂಬಲಕ್ಕೆ ಮನವಿ ಮಾಡಿದ್ದೇವೆ. ಜೆಡಿಎಸ್ ಬೆಂಬಲಿಸಿದರೇ ಬಿಜೆಪಿಗೆ ಲಾಭವಾಗಲಿದೆ.

Key words:BJP -15 seats –legislative council-election-Former CM- BS Yeddyurappa- confidence.