ಬೆಂಗಳೂರಿನಲ್ಲಿ ಜ.31ರವರೆಗೂ 144 ಸೆಕ್ಷನ್ ವಿಸ್ತರಣೆ.

ಬೆಂಗಳೂರು,ಜನವರಿ,17,2022(www.justkannada.in):  ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊವೀಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ಜನವರಿ 31ರವರೆಗೂ 144 ಸೆಕ್ಷನ್ ವಿಸ್ತರಣೆ ಮಾಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.

ಬೆಂಗಳೂರಿನಲ್ಲಿ ಕೋರೋನಾ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಈ ಹಿನ್ನೆಲೆಯಲ್ಲಿ ಜನವರಿ 31ರವರೆಗೆ ನಿಷೇಧಾಜ್ಞೆ ಮುಂದುವರೆಸಲಾಗಿದೆ. ನಗರದಲ್ಲಿ ಯಾವುದೇ  ರ್ಯಾಲಿ ಸಮಾರಂಭಕ್ಕೆ ಅವಕಾಶ ಇಲ್ಲ ಐದಕ್ಕಿಂತ ಹೆಚ್ಚು ಜನ ಗುಂಪುಗೂಡುವಂತಿಲ್ಲ ಎಂದು ತಿಳಿಸಿದ್ದಾರೆ.

ಹಾಗೆಯೇ ಆದೇಶ ಉಲ್ಲಂಘಿಸಿದರೇ ಎನ್ ಡಿಎಂಎ ಆಕ್ಟ್ ಅಡಿ ಕೇಸ್  ದಾಖಲು ಮಾಡಲಾಗುತ್ತದೆ ಎಂದು ಕಮಲ್ ಪಂತ್ ಎಚ್ಚರಿಕೆ ನೀಡಿದ್ದಾರೆ.

Key words: 144 Section- Expansion – Bangalore – Jan. 31