ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿ ಸರಿಯಾಗಿ ನಿರ್ಮಾಣ ಆಗಿಲ್ಲ- ಗೃಹ ಸಚಿವ ಡಾ.ಜಿ.ಪರಮೇಶ್ವರ್​

ಬೆಂಗಳೂರು,ಜುಲೈ,11,2023(www.justkannada.in):  ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಅಪಘಾತ ಪ್ರಕರಣ ಹೆಚ್ಚಳ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿ ಸರಿಯಾಗಿ ನಿರ್ಮಾಣ ಮಾಡಿಲ್ಲ ಎಂದು  ಗೃಹ ಸಚಿವ ಡಾ.ಜಿ.ಪರಮೇಶ್ವರ್​ ಆರೋಪಿಸಿದರು.

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಅಪಘಾತ ಪ್ರಕರಣ ಹೆಚ್ಚಳ ಕುರಿತು ವಿಧಾನಸಭೆಯಲ್ಲಿ ಬಿಜೆಪಿ ಶಾಸಕ ಸುರೇಶ್ ​ಕುಮಾರ್​ ಪ್ರಶ್ನೆ ಮಾಡಿದರು. ಇದಕ್ಕೆ ಉತ್ತರಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್​ ಸರಿಯಾಗಿ ಬೆಂಗಳೂರು-ಮೈಸೂರು ಹೆದ್ದಾರಿ ನಿರ್ಮಾಣ ಮಾಡಿಲ್ಲ. ಬಹಳಷ್ಟು ನ್ಯೂನತೆಗಳೊಂದಿಗೆ ದಶಪಥ ನಿರ್ಮಾಣ ಮಾಡಲಾಗಿದೆ. ರಸ್ತೆ ತಿರುವುಗಳಿಗೆ, ವೇಗ ಮಿತಿ‌ ಇಳಿಕೆಗೆ ಯಾವುದೇ ಸೂಚನಾ ಫಲಕಗಳಿಲ್ಲ. ವೇಗವಾಗಿ ವಾಹನ ಓಡಿಸಿ ಬಂದಾಗ ಅಪಘಾತಗಳಾಗುತ್ತಿವೆ ಎಂದು ಹೇಳಿದರು.

Key words: Bangalore-Mysore- Express- Highway – not –properly- constructed – Home Minister- Dr. G. Parameshwar