Tuesday, August 4, 2026

BDA Apartments

Home Front Page ಮಳೆಯಿಂದ ಬೆಳೆ ಹಾನಿ: ರಾಜ್ಯಕ್ಕೆ ಕೇಂದ್ರ ತಂಡ ಕಳುಹಿಸುವಂತೆ ಮನವಿ ಮಾಡುತ್ತೇವೆ ಎಂದ ಮಾಜಿ ಸಿಎಂ...

ಮಳೆಯಿಂದ ಬೆಳೆ ಹಾನಿ: ರಾಜ್ಯಕ್ಕೆ ಕೇಂದ್ರ ತಂಡ ಕಳುಹಿಸುವಂತೆ ಮನವಿ ಮಾಡುತ್ತೇವೆ ಎಂದ ಮಾಜಿ ಸಿಎಂ ಬಿಎಸ್ ವೈ.

ಬಾಗಲಕೋಟೆ,ನವೆಂಬರ್,20,2021(www.justkannada.ion): ರಾಜ್ಯದಲ್ಲಿ ಸುರಿಯುತ್ತಿರುವ ನಿರಂತರ ಮಳೆಗೆ ಬೆಳೆಹಾನಿಯಾಗಿದೆ. ಹೀಗಾಗಿ ರಾಜ್ಯಕ್ಕೆ ಕೇಂದ್ರ ತಂಡ ಕಳುಹಿಸುವಂತೆ ಮನವಿ ಮಾಡುತ್ತೇವೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು.

ಬಾಗಲಕೋಟೆಯಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಬಿಎಸ್ ಯಡಿಯೂರಪ್ಪ, ಮಳೆ ಹಾನಿ ಸಂಬಂಧ ಸಿಎಂ ಸಭೆ ಕರೆದಿದ್ದಾರೆ. ರಾಜ್ಯಕ್ಕೆ ಕೇಂದ್ರ ತಂಡ ಕಳುಹಿಸುವಂತೆ ಪ್ರಧಾನಿ ಮೋದಿ ಅವರಿಗೆ ಮನವಿ ಮಾಡುತ್ತೇವೆ. ಬೆಳೆ ಹಾನಿ ಪರಿಶೀಲನೆ ಬಳಿಕ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡಲಾಗುತ್ತದೆ ಎಂದರು.

ಇನ್ನು ಪರಿಷತ್ ಚುನಾವಣೆ ಬಳಿಕ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳುತ್ತೇನೆ. ಪ್ರತಿ ಜಿಲ್ಲೆಗೂ ಭೇಟಿ ನೀಡಿ ಪಕ್ಷ ಸಂಘಟನೆ ಮಾಡುತ್ತೇನೆ. ಪಕ್ಷ ಅಧಿಕಾರಕ್ಕೆ ತರಲು ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಎಂದು ಬಿಎಸ್ ಯಡಿಯೂರಪ್ಪ ನುಡಿದರು.

Key words: Crop -damage – rain-Former CM- BS yeddyurappa- appeal-send – central team.